ಕಾರ್ಕಳ : ಕಾರ್ಕಳ ತಾಲೂಕು ನೂರಾಳ್ ಬೆಟ್ಟು ವಿನ ಸುಜಯ ಎಂಬವರು ಬೈಕ್ ನಲ್ಲಿ ಹೋಗುತ್ತಿರುವ ವೇಳೆ ಬೈಕ್ ಸ್ಕಿಡ್ ಆಗಿ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದವರು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.
ಸುಜಯ ಅವರು ಸೆಪ್ಟೆಂಬರ್ 4ರಂದು ಹೊಸ್ಮಾರಿನ ರಾಜವರ್ಮ ಮುದ್ಯ ಎಂಬವರೊಂದಿಗೆ ಬೈಕ್ ನಲ್ಲಿ ಹೊರನಾಡು ದೇವಸ್ಥಾನಕ್ಕೆ ಹೋಗಿ ಮನೆಗೆ ವಾಪಸಾಗುತ್ತಿದ್ದ ವೇಳೆ ಮಾಳ ಗ್ರಾಮದ ಮುಳ್ಳೂರು ಘಾಟಿಯ ತಿರುವಿನಲ್ಲಿ ನಿಯಂತ್ರಣ ತಪ್ಪಿದ ಬೈಕ್ ಸ್ಕಿಡ್ ಆಗಿ ಸವಾರ ಸುಜಯ ಹಾಗೂ ಸಹಸವಾರ ರಾಜವರ್ಮ ಮುದ್ಯ ರಸ್ತೆಗೆ ಬಿದ್ದು ಗಾಯಗೊಂಡಿದ್ದರು.
ರಾಜವರ್ಮ ಮುದ್ಯ ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಸುಜಯ ಅವರು ಗಂಭೀರವಾಗಿ ಗಾಯಗೊಂಡಿದ್ದು ಮಣಿಪಾಲ ಕೆಎಂಸಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಬಳಿಕ ಕಾರ್ಕಳ ಸರಕಾರಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು .
ಆದರೆ ಚಿಕಿತ್ಸೆಗೆ ಸ್ಪಂದಿಸದೆ ಸುಜಯ ಅವರು ಸೋಮವಾರ ರಾತ್ರಿ ಮೃತಪಟ್ಟಿದ್ದಾರೆ. ಈ ಕುರಿತು ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.