ಕಾರ್ಕಳ : ವಿಧಾನಸಭಾ ಚುನಾವಣೆಯ ಪ್ರಚಾರ ಸಮಿತಿಯ ಅದ್ಯಕ್ಷ ಎಂ. ಬಿ. ಪಾಟೀಲ್ ನೇತೃತ್ವದಲ್ಲಿ ಬ್ಲಾಕ್ ಕಾಂಗ್ರೆಸ್ ಚುನಾವಣಾ ಪ್ರಚಾರ ಸಮಿತಿಗಳಿಗೆ ಅಧ್ಯಕ್ಷರನ್ನು ನೇಮಿಸಲಾಗುತ್ತಿದ್ದು, ಕಾರ್ಕಳ ಬ್ಲಾಕ್ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷರಾಗಿ ಪುರಸಭಾ ಸದಸ್ಯ, ಕಾಂಗ್ರೆಸ್ ವಕ್ತಾರ ಶುಭದ ರಾವ್ ನೇಮಕಗೊಂಡಿದ್ದಾರೆ.
ಡಾ. ಎಂ ವೀರಪ್ಪ ಮೊಯಿಲಿಯವರ ಮಾರ್ಗದರ್ಶನದಲ್ಲಿ, ಜಿಲ್ಲಾ ಪ್ರಚಾರ ಸಮಿತಿಯ ಅದ್ಯಕರಾದ ಹರೀಶ್ ಕಿಣಿ ಹಾಗೂ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅದ್ಯಕ್ಷ ಸದಾಶಿವ ದೇವಾಡಿಗರ ಶಿಫಾರಸಿನಂತೆ ವಿಧಾನ ಪರಿಷತ್ ಸದಸ್ಯ ಹಾಗೂ ರಾಜ್ಯ ಪ್ರಚಾರ ಸಮಿತಿಯ ಸಹ ಅದ್ಯಕ್ಷರಾದ ಮಂಜುನಾಥ್ ಭಂಡಾರಿಯವರು ಪುರಸಭಾ ಸದಸ್ಯ ಬ್ಲಾಕ್ ಕಾಂಗ್ರೆಸ್ ವಕ್ತಾರ ಶುಭದರಾವ್ ಇವರನ್ನು ಕಾರ್ಕಳ ಬ್ಲಾಕ್ ಚುನಾವಣಾ ಪ್ರಚಾರ ಸಮಿತಿಯ ಅದ್ಯಕ್ಷರಾಗಿ ನೇಮಿಸಿದ್ದಾರೆ. ಶುಭದ ರಾವ್ ಅವರು ಹಲವಾರು ಸಂಘ ಸಂಸ್ಥೆಗಳಲ್ಲಿ ಸೇವೆ ಸಲ್ಲಿಸಿಸುತ್ತಿದ್ದು ಜನಪರ ಹೋರಾಟಗಾರರಾಗಿ ಗುರುತಿಸಿಕೊಂಡಿದ್ದಾರೆ.