ಕಾರ್ಕಳ : ಪ್ರಜಾಪ್ರಭುತ್ವವನ್ನು ವಿದ್ಯಾರ್ಥಿದೆಸೆಯಲ್ಲಿಯೇ ನಡೆಸಿಕೊಂಡು ಹೋಗುವ ಹುಮ್ಮಸ್ಸು ಇರಬೇಕು. ಬ್ರಿಟಿಷರು ಬಿಟ್ಟುಹೋದ ಚಿಂತನೆಗಳನ್ನು ತಿರಸ್ಕರಿಸಿ ಭಾರತೀಯತೆಯ ಹೊಳಹಿರುವ ಅಂಶಗಳನ್ನು ಅಳವಡಿಸಿಕೊಂಡು ಮುನ್ನಡೆಯಬೇಕು. ಕರ್ತವ್ಯಾಧಾರಿತ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸಬೇಕು. ಪ್ರಜಾಪ್ರಭುತ್ವದಲ್ಲಿ ಹಲವು ಋಣಾತ್ಮಕ ಅಂಶಗಳೂ ಇವೆ. ಅವನ್ನೆಲ್ಲಾ ಗಮನಿಸಿ ವಿದ್ಯಾರ್ಥಿಗಳು ಭಾರತದ ಯಶೋಗಾಥೆಗೆ ದುಡಿಯಬೇಕು ಎಂದು ಕಾಲೇಜಿನ ಪೂರ್ವ ವಿದ್ಯಾರ್ಥಿ ಏರ್‌ವೈಸ್ ಮಾರ್ಷಲ್ ರಮೇಶ್ ಕಾರ್ಣಿಕ್ ಹೇಳಿದರು.
ಅವರು ಶ್ರೀ ಭುವನೇಂದ್ರ ಕಾಲೇಜಿನಲ್ಲಿ ಪ್ರಸಕ್ತ ಶೈಕ್ಷಣಿಕ ವರುಷದ ವಿದ್ಯಾರ್ಥಿ ಪರಿಷತ್ತಿನ ಕಾರ್ಯಚಟುವಟಿಕೆಗಳನ್ನು ಉದ್ಘಾಟಿಸಿ ಮಾತನಾಡುತ್ತಿದ್ದರು.
ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷರಾದ ಸಿ.ಎ. ಶಿವಾನಂದ ಪೈ ಮಾತನಾಡಿ, ಇಂದಿನ ವಿದ್ಯಾರ್ಥಿಗಳಿಗೆ ಅವಕಾಶಗಳು ಸಾಕಷ್ಟಿರುತ್ತವೆ. ಆದರೆ ಅವುಗಳನ್ನು ಬಳಸಿಕೊಳ್ಳುವಲ್ಲಿ ಎಡವಬಾರದು. ತಯಾರಿಯನ್ನು ಮಾಡಿಕೊಂಡು ಮುಂದಿನ ತಲೆಮಾರಿಗೂ ಆದರ್ಶರಾಗಿ ಕಾಣುವಂತಾಗಬೇಕೆAದು ಹೇಳಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ ಕಾಲೇಜಿನ ಪ್ರಾಚಾರ್ಯ ಡಾ. ಮಂಜುನಾಥ್ ಎ. ಕೋಟ್ಯಾನ್ ಮಾತನಾಡಿ, ವಿದ್ಯಾರ್ಥಿಗಳಿಗೆ ಅನೇಕ ಸವಾಲುಗಳಿರುತ್ತವೆ. ಒಂದೊAದನ್ನೆ ಮೆಟ್ಟಿನಿಲ್ಲುತ್ತಾ , ನಿಭಾಯಿಸುತ್ತಾ ಬದುಕನ್ನು ಕಟ್ಟಿಕೊಂಡು ದೇಶದ ಆರ್ಥಿಕತೆಯನ್ನು ಬಲಪಡಿಸುವಲ್ಲಿ ಶ್ರಮಿಸಬೇಕೆಂದರು.
ಕಾಲೇಜಿನ ಪೂರ್ವ ವಿದ್ಯಾರ್ಥಿ ಹಾಗೂ ಆಡಳಿತ ಮಂಡಳಿ ಸದಸ್ಯ ವೈ. ಮೋಹನ್ ಶೆಣೈಯವರು ಸಮಾರಂಭದಲ್ಲಿ ಮಾತನಾಡಿದರು.
ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ ದತ್ತಾತ್ರೇಯ, ಸಹ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ. ನಂದಕಿಶೋರ್ ಸಮಾರಂಭದಲ್ಲಿ ಉಪಸ್ಥಿತರಿದ್ದರು.
ಶ್ರದ್ಧಾ ಶೆಟ್ಟಿ ಸ್ವಾಗತಿಸಿ, ಶೈನಾ ಪಿರೇರಾ ವಂದಿಸಿದರು. ಹ್ಯಾನ್ಸನ್ ಹಾಗೂ ವಿಯೋಲಾ ಕಾರ್ಯಕ್ರಮ ನಿರೂಪಿಸಿದರು.






