ಕಾರ್ಕಳ : ಇಂದಿನ ದಿನಗಳಲ್ಲಿ ವಿದ್ಯಾರ್ಥಿಗಳ ಅಧ್ಯಯನಕ್ಕೆ ಸರಕಾರ ಸಾಕಷ್ಟು ಸಹಾಯವನ್ನೊದಗಿಸುತ್ತಿದೆ. ಸರಕಾರಿ ಸೌಲಭ್ಯಗಳನ್ನು ಬಳಸಿಕೊಂಡು , ಅಧ್ಯಯನಶೀಲರಾಗಿ ಉತ್ತಮ ವಿದ್ಯಾರ್ಥಿಗಳಾಗುವುದರ ಜೊತೆಗೆ ದೇಶದ ಸತ್ಪçಜೆಗಳಾಗುವುದು ಅತೀ ಅಗತ್ಯ ಎಂದು ಕಾಲೇಜಿನ ಪ್ರಾಚಾರ್ಯ ಡಾ.ಮಂಜುನಾಥ್ ಎ.ಕೋಟ್ಯಾನ್ ಹೇಳಿದರು.
ಅವರು ಕಾಲೇಜಿನ ಹಿಂದುಳಿದ ವರ್ಗದ ವಿದ್ಯಾರ್ಥಿಗಳ ಸಮಾವೇಶದ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು.
ಸಮಾರಂಭದಲ್ಲಿ ಹಿಂದಿ ವಿಭಾಗದ ಮುಖ್ಯಸ್ಥರಾದ ಪ್ರೊ.ನಾಗಭೂಷಣ ಹಾಗೂ ವ್ಯವಹಾರ ಅರ್ಧಯಯನ ವಿಭಾಗದ ಮುಖ್ಯಸ್ಥರಾದ ಪ್ರೊ. ನಂದಕಿಶೋರ್ ಉಪಸ್ಥಿತರಿದ್ದು ಸೂಕ್ತ ಸಲಹೆಸೂಚನೆ ನೀಡಿದರು. ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮವೂ ನಡೆಯಿತು.
ಕಾಲೇಜಿನ ಹಿಂದುಳಿಗ ವರ್ಗ ಘಟಕದ ಸಂಯೋಜಕರೂ, ಸಸ್ಯಶಾಸ್ತç ವಿಭಾಗದ ಮುಖ್ಯಸ್ಥರೂ ಆದ ಪ್ರೊ.ಯೋಗೀಶ್ ಕುಮಾರ್ ಅವರು ಪ್ರಾಸ್ತಾವಿಕ ಮಾತುಗಳನ್ನಾಡಿದರು.
ಇತಿಹಾಸ ವಿಭಾಗದ ಮುಖ್ಯಸ್ಥರಾದ ಶ್ರೀಮತಿ ಸುಚಿತ್ರಾ ಅವರು ಸ್ವಾಗತಿಸಿದರು.ಕಾಲೇಜಿನ ವಾಣಿಜ್ಯವಿಭಾಗದ ಮುಖ್ಯಸ್ಥರಾದ ಪ್ರೊ.ಶಿವಶಂಕರ್ ವಂದಿಸಿದರು. ಕಾಲೇಜಿನ ಅಂತಿಮ ಬಿ.ಎಸ್ಸಿ. ವಿದ್ಯಾರ್ಥಿ ಗಣೇಶ್ ಬಿ.ಸಿ. ಕಾರ್ಯಕ್ರಮ ನಿರೂಪಿಸಿದರು.




