ಕಾರ್ಕಳ: ನಾವು ಮೊದಲು ನಮ್ಮ ಮನಸ್ಥಿತಿಯನ್ನು ಬದಲಾಯಿಸಿಕೊಂಡು ನಮ್ಮ ಆಲೋಚನೆ ಮತ್ತು ಕೆಲಸಗಳಲ್ಲಿ÷ಹೊಸತನವನ್ನು ಬೆಳೆಸಿಕೊಂಡು ಕಾರ್ಯಪ್ರವೃತ್ತರಾದಾಗ ಮಾತ್ರ ಜಗತ್ತಿನಲ್ಲಿ ಬದಲಾವಣೆ ನಿರೀಕ್ಷಿಸಬಹುದು. ಅದಕ್ಕಾಗಿ ಸ್ವಯಂ ಜಾಗೃತಿ ಅತೀ ಅಗತ್ಯವಾಗಿದೆ ಎಂದು ಎಸ್.ಜೆ. ಹೇಮಚಂದ್ರ ಹೇಳಿದರು.
ಅವರು ಕಾರ್ಕಳ ಭುವನೇಂದ್ರ ಕಾಲೇಜಿನ ಮಾಹಿತಿ ಮತ್ತು ವೃತ್ತಿ ಮಾರ್ಗದರ್ಶನ ಕೇಂದ್ರ ಹಾಗೂ ಮಂಗಳೂರು ವಿವಿ ಉದ್ಯೋಗ ಮಾಹಿತಿ ಮತ್ತು ಮಾರ್ಗದರ್ಶನ ಕೇಂದ್ರದ ಜಂಟಿ ಆಶ್ರಯದಲ್ಲಿ ನಡೆದ ವೃತ್ತಿ ಸಮಾವೇಶ ಕಾರ್ಯಾಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು.
ಕಾಲೇಜಿನ ಪ್ರಾಚಾರ್ಯ ಡಾ. ಮಂಜುನಾಥ್ ಎ. ಕೋಟ್ಯಾನ್ ಅಧ್ಯಕ್ಷತೆ ವಹಿಸಿದ್ದರು.
ಇನ್ನೊರ್ವ ಸಂಪನ್ಮೂಲ ವ್ಯಕ್ತಿ ಪ್ರೊ. ಅಬ್ಬೂಬ್ಬಕರ್ ಕೌಶಲ್ಯದ ಕುರಿತು ತರಬೇತಿ ನೀಡಿದರು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಪ್ರೊ.ದತ್ತಾತ್ರೇಯ , ಸಂಯೋಜಕ ಮಹೇಶ್ ಶೆಟ್ಟಿ ಉಪಸ್ಥಿತರಿದ್ದರು.
ಮಹೇಶ್ ಶಟ್ಟಿ ಸ್ವಾಗತಿಸಿ, ಮಹೇಶ್ ಪ್ರಭು ವಂದಿಸಿದರು. ಹನ್ಸಿಫಾ ಕಾರ್ಯಕ್ರಮ ನಿರೂಪಿಸಿದರು.