ಕಾರ್ಕಳ: ಜ್ಯೋತಿ ಯುವಕ ಮತ್ತು ಜ್ಯೋತಿ ಮಹಿಳಾ ಮಂಡಲ (ರಿ) ಕಾಳಿಕಾಂಬ ಇವರ ಆಶ್ರಯದಲ್ಲಿ ಮಕ್ಕಳ ದಿನಾಚರಣೆಯ ಪ್ರಯುಕ್ತ ಪೂರ್ವ ಪ್ರಾಥಮಿಕ, ಪ್ರಾಥಮಿಕ, ಮತ್ತು ಪ್ರೌಢಶಾಲಾ ಮಕ್ಕಳಿಗೆ ಆಯೋಜಿಸಲಾದ ವಿವಿದ ಸ್ಪರ್ಧೆಗಳ ಕ್ರೀಡಾಕೂಟವು ಕಾಳಿಕಾಂಬ ಜ್ಯೊತಿ ಮೈದಾನದಲ್ಲಿ ನಡೆಯಿತು. ರೋಟರಿ ಕ್ಲಬ್ ಮಾಜಿ ಅಧ್ಯಕ್ಷೆ ರೇಖಾ ಉಪಾಧ್ಯಾಯ ಕ್ರೀಡಾಕೂಟ ಉದ್ಘಾಟಿದರು. ಸಂಜೆ ನಡೆದ ಸಮಾರೋಪ ಸಮಾರಂಬದಲ್ಲಿ ಎಸ್ ಎಸ್ ಎಲ್ ಸಿ ಮತ್ತು ಪಿ.ಯು.ಸಿ ಯಲ್ಲಿ ಶೇಕಡಾ 85 ಕಿಂತ ಹೆಚ್ಚು ಅಂಕ ಪಡೆದ ಪ್ರತಿಭಾನ್ವಿತ 5 ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.
ಕನ್ನಡ ಹಾಗೂ ತುಳು ಸಿನೆಮಾ ನಟ ಜಿನಪ್ರಸಾದ್ ಧರ್ಮಸ್ಥಳ ಮುಖ್ಯ ಅತಿಥಿಯಾಗಿ ಭಾಗವಹಿಸಿ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಮಾತನಾಡಿ, ನಿಮ್ಮ ಕೈಯಲ್ಲಿ ಮೊಬೈಲ್ ಇಲ್ಲದ ಕಾರಣ ಪುರಸ್ಕಾರ ಮತ್ತು ಪ್ರಶಸ್ತಿಗಳು ಇವೆ. ಮಕ್ಕಳಿಗೆ ಮೊಬೈಲ್ ಅನಿವಾರ್ಯವಾಗಬಾರದು ಅಗ ಮಾತ್ರ ಉನ್ನತ ಸಾದನೆ ಮಾಡಲು ಸಾದ್ಯ ಎಂದರು.
ಇ- ಲಾಜಿಕ್ ಎಸ್ ಎ ಆರ್ ಎಲ್ ಮ್ಯಾನೇಜಿಂಗ್ ಡೈರೆಕ್ಟರ್ ದಿನೇಶ್ ಶೆಟ್ಟಿ ವಿಜೇತ ಮಕ್ಕಳಿಗೆ ಬಹುಮಾನಗಳನ್ನು ವಿತರಿಸಿದರು. ಈ ಸಂದರ್ಭದಲ್ಲಿ ಯುವಕ ಮಂಡಲದ ಅದ್ಯಕ್ಷ ಸುಧಾಕರ್ ಕೋಟ್ಯಾನ್, ಮಹಿಳಾ ಮಂಡಲದ ಅದ್ಯಕ್ಷೆ ದಿವ್ಯಾ ಶುಭದ್, ಗೌರವಾಧ್ಯಕ್ಷೆ ಯಶ, ಕ್ರೀಡಾ ಕಾರ್ಯದರ್ಶಿಗಳಾದ ಪ್ರಕಾಶ್ ಸುರೈ, ಶ್ವೇತಾ ಸುರೇಶ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಿಕ್ಷಕ ಹರೇಂದ್ರರಾವ್ ಸನ್ಮಾನಿತರ ಪಟ್ಟಿ ವಾಚಿಸಿದರು ಶುಭದರಾವ್ ಕಾರ್ಯಕ್ರಮ ನಿರೂಪಿಸಿದರು.