ಕಾರ್ಕಳ : ಕಾರ್ಕಳದ ಕುಕ್ಕುಂದೂರಿನಲ್ಲಿ ಮಹಿಳೆಯೊಬ್ಬರ ಕತ್ತಿನಿಂದ 2 ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ಕಸಿದು ಪರಾರಿಯಾಗಿರುವ ಘಟನೆ ಶುಕ್ರವಾರ ರಾತ್ರಿ ನಡೆದಿದೆ.
ಕುಕ್ಕುಂದೂರಿನ ಶ್ರೀಮತಿ ಕೆ ಗಾಯತ್ರಿ ಕಾಮತ್ ಎಂಬವರು ಶುಕ್ರವಾರ ನಂಜೆ ಪತಿಯೊಂದಿಗೆ ಕಾರ್ಕಳ ಶ್ರೀ ಮಾರಿಯಮ್ಮ ದೇವಿಯ ಬ್ರಹ್ಮಕಲಶೋತ್ಸವದ ಅಂಗವಾಗಿ ನಡೆದ ಮೆರವಣಿಗೆಯಲ್ಲಿ ಭಾಗವಹಿಸಿ ದೇವಸ್ಥಾನದಲ್ಲಿ ಕಾರ್ಯಕ್ರಮ ಮುಗಿಸಿ ರಾತ್ರಿ 11 ಗಂಟೆಯ ವೇಳೆಗೆ ಮನೆಗೆ ಹೋಗಿದ್ದರು.
ಮನೆಗೆ ಹೋದವರು ಪತಿ ಮನೆಯ ಬೀಗ ತೆಗೆಯುತ್ತಿದ್ದ ವೇಳೆ ಗಾಯತ್ರಿ ಅವರು ಗೇಟು ಹಾಕಲೆಂದು ಹೋದಾಗ ಬೈಕಿನಲ್ಲಿ ಬಂದ ಇಬ್ಬರು ಅಪರಿಚಿತ ವ್ಯಕ್ತಿಗಳು ಗಾತ್ರಿ ಅವರ ಕತ್ತಿನಲ್ಲಿದ್ದ ಚಿನ್ನದ ಕರಿಮಣಿ ಸರ ಸೇರಿದಂತೆ ಸುಮಾರು 2 ಲಕ್ಷ ರೂ. ಮೌಲ್ಯದ ಚಿನ್ನದ ಸರಗಳನ್ನು ಎಳೆದೊಯ್ದು ಪರಾರಿಯಾಗಿದ್ದಾರೆ.
ಈ ಕುರಿತು ಕಾರ್ಕಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.