Share this news

ಕಾರ್ಕಳ : ಮಾರಿಯಮ್ಮ ದೇವಸ್ಥಾನದ ಆಡಳಿತ ಮಂಡಳಿ ಹಾಗೂ ಜೀರ್ಣೋದ್ದಾರ ಸಮಿತಿ, ಕಾರ್ಕಳ ಪುರಸಭೆ ಮತ್ತು ಅರಣ್ಯ ಇಲಾಖೆಯ ಸಹಯೋಗದೊಂದಿದೆ ಭಾನುವಾರ ರಾಮಸಮುದ್ರ ಬಳಿಯ ತೋಟಗಾರಿಕೆ ವಠಾರದಲ್ಲಿ ಗಿಡ ನೆಡುವುದರ ಮೂಲಕ ವನಮಹೋತ್ಸವವನ್ನು ಅಚರಿಸಲಾಯಿತು.
ಕಾರ್ಕಳ ಶಾಸಕ ವಿ.ಸುನಿಲ್ ಕುಮಾರ್ ಗಿಡ ನೆಡುವ ಮೂಲಕ ವನಮಹೋತ್ಸವ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮಾರಿಯಮ್ಮ ದೇವಸ್ಥಾನದ ಜೀರ್ಣೋದ್ದಾರ ಕಾರ್ಯದಲ್ಲಿ ದೇವಸ್ಥಾನಕ್ಕೆ ಬಳಸಿದ ಮರಗಳ ಬದಲಾಗಿ ಗಿಡಗಳನ್ನು ನೆಟ್ಟು ಅವುಗಳನ್ನು ಪೋಷಣೆ ಮಾಡಬೇಕೆನ್ನುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು. ಅರಣ್ಯ ರಕ್ಷಣೆಯ ಜತೆಗೆ ಪರಿಸರ ರಕ್ಷಣೆ ನಮ್ಮೆಲ್ಲರ ಹೊಣೆಗಾರಿಕೆಯಾಗಿದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರು ಗಿಡಗಳನ್ನು ನೆಟ್ಟು ಸಂರಕ್ಷಿಸಬೇಕೆAದು ಕರೆ ನೀಡಿದರು.

ಈ ಸಂದರ್ಭದಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿ ಸತೀಶ್ ನಿಟ್ಟೆ, ವಲಯ ಅರಣ್ಯಾಧಿಕಾರಿ ಜಿ.ಡಿ ದಿನೇಶ್, ಉಪ ವಲಯ ಅರಣ್ಯಾಧಿಕಾರಿ ರಾಘವೇಂದ್ರ ಶೆಟ್ಟಿ, ಪುರಸಭೆ ಮುಖ್ಯಾಧಿಕಾರಿ ರೂಪಾ ಶೆಟ್ಟಿ, ತಾ.ಪಂ ಕಾರ್ಯನಿರ್ವಹಣಾಧಿಕಾರಿ ಗುರುದತ್.ಎನ್, ಉದ್ಯಮಿ ಸುಜಯ ಶೆಟ್ಟಿ, ವಿಜಯ ಶೆಟ್ಟಿ, ನವೀನ್ ನಾಯಕ್ ಮುಂತಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *