ಉಡುಪಿ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ 2023-24ನೇ ಸಾಲಿನ ಮಕ್ಕಳ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆಸಲ್ಲಿಸುತ್ತಿರುವ ಕಾರ್ಕಳ ಶ್ರೀ ಗುರುರಾಘವೇಂದ್ರ ಸೇವಾ ಟ್ರಸ್ಟ್ ನಡೆಸುತ್ತಿರುವ ಕಾರ್ಕಳ ಅಯ್ಯಪ್ಪನಗರದ ವಿಜೇತ ವಿಶೇಷ ಶಾಲೆಗೆ ರಾಜ್ಯ ಪ್ರಶಸ್ತಿ ಲಭಿಸಿದೆ
ಬೆಂಗಳೂರಿನ ಜವಾಹರ ಬಾಲಭವನ ಸೊಸೈಟಿ ಕಬ್ಬನ್ ಉದ್ಯಾನವನದಲ್ಲಿ ಗುರುವಾರ ನಡೆದ ಮಕ್ಕಳ ದಿನಾಚರಣೆ ಕಾರ್ಯಕ್ರಮದಲ್ಲಿ ವಿಜೇತ ವಿಶೇಷ ಶಾಲೆಯ ಸ್ಥಾಪಕರಾದ ಡಾ. ಕಾಂತಿ ಹರೀಶ್ ಅವರಿಗೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವರಾದ ಲಕ್ಷಿö್ಮÃ ಹೆಬ್ಬಾಳ್ಕರ್ ಪ್ರಶಸ್ತಿ ಪತ್ರ ಹಾಗೂ ಒಂದು ಲಕ್ಷ ರೂ ಚೆಕ್ ನೀಡಿ ಗೌರವಿಸಿದರು
ಶ್ರೀ ಗುರುರಾಘವೇಂದ್ರ ಸೇವಾ ಟ್ರಸ್ಟ್ ಸಂಸ್ಥೆಯನ್ನು ಪ್ರಶಸ್ತಿಗೆ ಆಯ್ಕೆ ಮಾಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಆಡಳಿತ ಮಂಡಳಿ ಹಾಗೂ ಸಿಬ್ಬಂದಿ ವರ್ಗವು ತುಂಬು ಹೃದಯದ ಕೃತಜ್ಞತೆಗಳನ್ನು ಸಲ್ಲಿಸಿದೆ