ಕಾರ್ಕಳ: ಕಾರ್ಕಳ ವಿಧಾನಸಭಾ ಕ್ಷೇತ್ರದ ಕಾರ್ಯ ವ್ಯಾಪ್ತಿಯಲ್ಲಿ ಕಳೆದ ಮೂರು ವರ್ಷಗಳಿಂದ ಕೋಟ್ಯಾಂತರ ರೂಪಾಯಿ ಅನುದಾನದಲ್ಲಿ ನಡೆದಿರುವ ಕಾಮಗಾರಿಗಳನ್ನು ಪರಿಶೀಲನೆ ನಡೆಸದೇ ಕಾಮಗಾರಿಗಳ ಬಿಲ್ಲನ್ನು ಮಂಜೂರು ಮಾಡಲಾಗುತ್ತಿದ್ದು. ಸದ್ರಿ ಕಾಮಗಾರಿಗಳ ಸ್ಥಳಪರಿಶೀಲನೆ ಮಾಡಿ ಬಿಲ್ಲನ್ನು ಮಂಜೂರು ಮಾಡುವಂತೆ ಕಾರ್ಕಳ ಜೆಡಿಎಸ್ ಘಟಕದ ವತಿಯಿಂದ ಜಿಲ್ಲಾಧಿಕಾರಿ ವಿದ್ಯಾಕುಮಾರಿ ಅವರಿಗೆ ಮನವಿ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಕಾರ್ಕಳ ತಾಲೂಕು ಜೆಡಿಎಸ್ ಅಧ್ಯಕ್ಷ ಕುಚ್ಚೂರು ಶ್ರೀಕಾಂತ್, ನಾಯಕರಾದ ಜಯರಾಮ ಆಚಾರ್ಯ, ರಮೇಶ್ ಕುಂದಾಪುರ, ಹಾಗೂ ಪಕ್ಷದ ಮುಖಂಡರು ಹಾಜರಿದ್ದರು