ಉಡುಪಿ: ಕಾರ್ಕಳ ಸರ್ಕಾರಿ ಆಸ್ಪತ್ರೆಯಲ್ಲಿ ಜೂನ್ 20ರಂದು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿಗಳು ನಡೆಸಿದ್ದರು ಎನ್ನಲಾದ ಸಾರ್ವಜನಿಕ ಸಭೆಯ ಕುರಿತು ವಿವರಣೆ ಕೇಳಿ ಜಿಲ್ಲಾ ಆರೋಗ್ಯ ಅಧಿಕಾರಿಗಳು ನೋಟಿಸ್ ಜಾರಿಗೊಳಿಸಿದ್ದಾರೆ
ಜೂನ್ 20ರಂದು ಆಸ್ಪತ್ರೆಯ ವೈದ್ಯಾಧಿಕಾರಿಗಳು ಸಭೆ ನಡೆಸಿದ್ದಾರೆಂದು ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾದ ಮಾಹಿತಿಯನ್ನು ಆಧರಿಸಿ ನೋಟಿಸ್ ಜಾರಿ ಮಾಡಲಾಗಿದೆ.
ಯಾವ ಉದ್ದೇಶ ಹಾಗೂ ನಿಯಮಾನುಸಾರವಾಗಿ ಈ ಸಭೆ ನಡೆಸಲಾಗಿದೆ ಹಾಗೂ ಸಭೆಯಲ್ಲಿ ಹಾಜರಿದ್ದ ಸಿಬ್ಬಂದಿಗಳು ಹಾಗೂ ಚರ್ಚಿಸಿದ ವಿವರಗಳನ್ನು ಪತ್ರದ ಮೂಲಕ ನೀಡುವಂತೆ ಸೂಚಿಸಲಾಗಿದೆ.
ಆಸ್ಪತ್ರೆಯಲ್ಲಿ ನಡೆದ ಅನೌಪಚಾರಿಕ ಸಭೆಯ ಕುರಿತಂತೆ ಸಾಮಾಜಿಕ ಜಾಲತಾಣಗಳು ಹಾಗೂ ಮಾಧ್ಯಮಗಳಲ್ಲಿ ವರದಿಗಳು ಪ್ರಕಟಗೊಂಡಿರುವ ಹಿನ್ನೆಲೆಯಲ್ಲಿ ಈ ಪ್ರಕರಣದ ಕುರಿತು ಕಾರ್ಕಳ ಶಾಸಕ ಸುನಿಲ್ ಕುಮಾರ್ ಅವರು ಜಿಲ್ಲಾ ಆರೋಗ್ಯಾಧಿಕಾರಿಗಳಲ್ಲಿ ಸ್ಪಷ್ಟನೆ ಕೋರಿದ್ದರು