Share this news

ಕಾರ್ಕಳ: ಕಾರ್ಕಳದ ಸೆಂಟ್ರಲ್ ಲೈಬ್ರರಿಯಲ್ಲಿ ಇಂದು “ರಾಷ್ಟ್ರೀಯ ಓದುವ ದಿನ” ಕಾರ್ಯಕ್ರಮ ನಡೆಯಿತು. ನಿವೃತ್ತ ಶಿಕ್ಷಕ ಮತ್ತು ಜ್ಯೋತಿಷಿ ಸುಬ್ರಹ್ಮಣ್ಯ ಆಚಾರ್ಯ ಇವರು ಪ್ರಧಾನ ಭಾಷಣಕಾರರಾಗಿ ಭಾಗವಹಿಸಿ “ಓದುವಿಕೆಯ ಮಹತ್ವ” ವಿಷಯದಲ್ಲಿ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ನಂತರ ಸ್ಪರ್ಧೆಗಳನ್ನು ನಡೆಸಲಾಯಿತು.

ಈ ಸಂದರ್ಭದಲ್ಲಿ ಪುರಸಭಾ ಸದಸ್ಯರಾದ ಶೋಭಾ ದೇವಾಡಿಗ, ಗ್ರಂಥ ಪಾಲಕಿ ವನಿತಾ, ಯೋಗಿತಾ, ಸಹಾಯಕರಾದ ಪ್ರವೀಣ್ ಉಪಸ್ಥಿತರಿದ್ದರು. ಸ್ಥಳೀಯ ಶಾಲೆಗಳಿಂದ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ಭಾಗವಹಿಸಿದ್ದರು.

Leave a Reply

Your email address will not be published. Required fields are marked *