ಕಾರ್ಕಳ : ಕಾರ್ಕಳ ತಾಲೂಕು ನಿಟ್ಟೆ ಗ್ರಾಮದ ಕೈಲಾಜೆ ಪಾದೆಮನೆ ಬೈದಾಳ್ ಎಂಬಲ್ಲಿ ಹಾಡುಹಗಲೇ ಮನೆಗೆ ನುಗ್ಗಿ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಹಾಗೂ ನಗದು ದರೋಡೆಗೈದಿರುವ ಪ್ರಕರಣ ಬೆಳಕಿಗೆ ಬಂದಿದೆ .
ಕೈಲಾಜೆ ಪಾದೆಮನೆ ಬೈದಾಳ್ ನ ಸಾವಿತ್ರಿ ರಾಘವೇಂದ್ರ ಭಟ್ ಅವರ ಮನೆಯಲ್ಲಿ ಗುರುವಾರ (ಫೆಬ್ರವರಿ 23 ) ಮನೆಯಲ್ಲಿ ಯಾರು ಇಲ್ಲದಿದ್ದ ವೇಳೆ ಬೆಳಿಗ್ಗೆ 10.30 ರಿಂದ 11.30ರ ಅವಧಿಯಲ್ಲಿ ಕಳ್ಳರು ಮನೆಯ ಬಾಗಿಲಿನ ಬೀಗವನ್ನು ಮುರಿದು ಒಳಗಿನ ಕೊಠಡಿಯಲ್ಲಿರಿಸಿದ್ದ ಕಪಾಟಿನ ಬಾಗಿಲನ್ನು ತೆರೆದು 164 ತೂಕದ 4,92,000 ರೂ. ಮೌಲ್ಯದ ಚಿನ್ನಾಭರಣಗಳು ಹಾಗೂ 5,500 ನಗದು ದರೋಡೆಗೈದು ಪರಾರಿಯಾಗಿದ್ದಾರೆ.
ಈ ಕುರಿತು ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.