ಕಾರ್ಕಳ : ಕಾರ್ಕಳ ಹೆಬ್ರಿ ತಾಲೂಕು ಮರಾಠಿ ಸಮಾಜ ಸೇವಾ ಸಂಘದ 2021-23 ನೇ ಸಾಲಿನ ಮಹಾಸಭೆಯು ಕಾರ್ಕಳ ಲ್ಯಾಂಪ್ಸ್ ಸೊಸೈಟಿಯ ಸಭಾಂಗಣದಲ್ಲಿ ಜರುಗಿತು.
ಸಂಘದ ಅಧ್ಯಕ್ಷರಾದ ಶಂಕರ್ ನಾಯ್ಕ್ ದುರ್ಗಾ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಂಘದ ಅಧ್ಯಕ್ಷನಾಗಿ ಸಂಘದ ಸರ್ವತೋಮುಖ ಅಭಿವೃದ್ಧಿಗೆ ಪ್ರಾಮಾಣಿಕ ಪ್ರಯತ್ನ ನಡೆಸಿದ್ದೇನೆ. ಮುಂದಿನ ದಿನಗಳಲ್ಲಿಯೂ ನೂತನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳಿಗೆ ನನ್ನ ಬೆಂಬಲ ಸದಾ ಇರುತ್ತದೆ ಎಂದರು.
ಈ ಸಂದರ್ಭದಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಎಸ್ ಎಸ್ ಎಲ್ ಸಿ ಮತ್ತು ಪಿ ಯು ಸಿಯಲ್ಲಿ ಅತ್ಯುತ್ತಮ ಸಾಧನೆ ಮಾಡಿದ ಸಮಾಜದ 6 ಮಂದಿ ವಿದ್ಯಾರ್ಥಿಗಳಿಗೆ ನಗದು ಪುರಸ್ಕಾರದೊಂದಿಗೆ ಅಭಿನಂದಿಸಲಾಯಿತು. ಅಸೌಖ್ಯದಲ್ಲಿದ್ದು, ಆರ್ಥಿಕವಾಗಿ ತೀರಾ ಹಿಂದುಳಿದಿರುವ ದುರ್ಗಾ ಗ್ರಾಮದ ಆಶಾ ನಾರಾಯಣ ನಾಯ್ಕ್ ರವರ ಮನೆ ರಿಪೇರಿಗೆ ಆರ್ಥಿಕ ನೆರವು ನೀಡಲಾಯಿತು.
ಇದೇ ಸಂದರ್ಭದಲ್ಲಿ ಸಂಘದ ಗೌರವಾಧ್ಯಕ್ಷರಾಗಿದ್ದ ದಿ.ಶೇಖರ್ ನಾಯ್ಕ್ ಮುದ್ರಾಡಿ ಹಾಗೂ ಕೋಶಾಧಿಕಾರಿಯಾಗಿದ್ದ, ದಿ.ಕೆ ಪಿ ನಾಯ್ಕ್ ಮಾಳ, ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸಿದ್ದ ಸಂಘದ ಅಜೀವ ಸದಸ್ಯರಾದ ದಿ.ಗೋಪಾಲ ನಾಯ್ಕ್ ಕುಕ್ಕುಜೆ ಹಾಗೂ ದಿ.ಸಂಜೀವ ನಾಯ್ಕ್ ಕಡ್ತಲ ಅವರಿಗೆ ಮೌನ ಪ್ರಾರ್ಥನೆಯ ಮೂಲಕ ಶೃದ್ದಾಂಜಲಿ ಅರ್ಪಿಸಲಾಯಿತು.
ಸಂಘದ ಪ್ರಧಾನ ಕಾರ್ಯದರ್ಶಿ ಹರೀಶ್ ನಾಯ್ಕ್ ಇರ್ವತ್ತೂರು ವಾರ್ಷಿಕ ವರದಿ ಮಂಡಿಸಿದರು. ಕೋಶಾಧಿಕಾರಿ ಶ್ರೀನಿವಾಸ ನಾಯ್ಕ್ ನಕ್ರೆ ಲೆಕ್ಕಪತ್ರ ಮಂಡಿಸಿದರು.
ವೇದಿಕೆಯಲ್ಲಿ ಸಂಘದ ನಿಕಟಪೂರ್ವ ಅಧ್ಯಕ್ಷರಾದ ಉಮೇಶ್ ನಾಯ್ಕ್ ಸೂಡ, ರಾಘವ ನಾಯ್ಕ್ ಮುದ್ರಾಡಿ ಹಾಗೂ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.
2023-25ನೇ ಸಾಲಿಗೆ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಸಲಾಯಿತು.
ಸಂಘದ ಉಪಾಧ್ಯಕ್ಷೆ ಸುಗಂಧಿ ನಾಯ್ಕ್ ಶಿವಪುರ ಸ್ವಾಗತಿಸಿ, ಯುವ ವೇದಿಕೆ ಅಧ್ಯಕ್ಷ ಪವನ್ ದುರ್ಗ ವಂದಿಸಿದರು. ಕ್ರೀಡಾ ಮತ್ತು ಸಾಂಸ್ಕೃತಿಕ ಕಾರ್ಯದರ್ಶಿ ಶೇಖರ್ ಕಡ್ತಲ ಕಾರ್ಯಕ್ರಮ ನಿರೂಪಿಸಿದರು.