Share this news

ಬೆಂಗಳೂರು: ಕಲಬುರ್ಗಿ ಜಿಲ್ಲೆಯಲ್ಲಿ ನಡೆದ ಕೆಇಎ ಪರೀಕ್ಷೆಯಲ್ಲಿ ಬ್ಲೂಟೂತ್ ಬಳಸಿ ಅಕ್ರಮವೆಸಗಿರುವ ಆರೋಪದಲ್ಲಿ ಪ್ರಮುಖ ಆರೋಪಿ ಆರ್.ಡಿ ಪಾಟೀಲ್ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಪ್ರಕರಣದಲ್ಲಿ ಪಾಟೀಲ್ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ನವೆಂಬರ್ 16 ಕ್ಕೆ ಮುಂದೂಡಿದೆ.

ಕಲಬುರ್ಗಿ ಜೆಎಂಎಫ್ ಸಿ ನ್ಯಾಯಾಲಯದಲ್ಲಿ ಕೆಇಎ ಪರೀಕ್ಷೆ ಅಕ್ರಮದ ಕಿಂಗ್ ಪಿನ್ ಆರ್.ಡಿ ಪಾಟೀಲ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಜಾಗೊಳಿಸಿತ್ತು. ಈ ಹಿನ್ನೆಲೆಯಲ್ಲಿ ಹೈಕೋರ್ಟ್ ಗೆ ಜಾಮೀನಿಗಾಗಿ ಆರ್.ಡಿ ಪಾಟೀಲ್ ಮೇಲ್ಮನವಿ ಸಲ್ಲಿಸಿದ್ದರು.
ಇಂದು ಜಾಮೀನು ಅರ್ಜಿಯನ್ನು ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠವು, ನವೆಂಬರ್.16ಕ್ಕೆ ಜಾಮೀನು ಅರ್ಜಿಯನ್ನು ಮುಂದೂಡಿದೆ.

 

 

 

 

 

 

 

 

Leave a Reply

Your email address will not be published. Required fields are marked *