ಕಾರ್ಕಳ : ಮುಂಬಯಿಗೆ ತೆರಳುತ್ತಿದ್ದ ಖಾಸಗಿ ಬಸ್ ಹಾಗೂ ಬೊಲೆರೋ ಡಿಕ್ಕಿ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಒರ್ವ ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡ ಘಟನೆ ಕಾರ್ಕಳ ತಾಲೂಕಿನ ಕೆದಿಂಜೆ ಎಂಬಲ್ಲಿ ಸಂಭವಿಸಿದೆ.
ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದ ಕೆದಿಂಜೆ ಎಂಬಲ್ಲಿ ನಂದಳಿಕೆ ಕಡೆಯಿಂದ ಬರುತ್ತಿದ್ದ ಮಹೀಂದ್ರಾ ಬೋಲೆರೊ ಜೀಪ್ ಕಾರ್ಕಳ ಕಡೆಯಿಂದ ಮುಂಬಯಿಗೆ ಹೋಗುತ್ತಿದ್ದ ರೇಷ್ಮಾ ಹೆಸರಿನ ಖಾಸಗಿ ಬಸ್ಸಿಗೆ ಡಿಕ್ಕಿ ಹೊಡೆದ ಪರಿಣಾಮ ಈ ಭೀಕರ ದುರ್ಘಟನೆ ಸಂಭವಿಸಿದೆ .

ಚಿಕ್ಕಮಗಳೂರು ಜಿಲ್ಲೆಯ ಜಯಪುರ ನಿವಾಸಿ ಶಿವಪ್ಪ 48 ಸ್ಥಳದಲ್ಲೇ ಮೃತಪಟ್ಟರೆ, ಮಂಜು 45 , ಸುಜಯ 28 ರವರ ಸ್ಥಿತಿ ಗಂಭೀರ ವಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿದೆ
ಕಾರ್ಕಳ ತಾಲೂಕಿನ ನಂದಳಿಕೆಯ ತಮ್ಮ ಕುಟುಂಬದ ಮನೆಗೆ ದೇವರ ಕಾರ್ಯಕ್ಕಾಗಿ ಚಿಕ್ಕಮಗಳೂರು ಜಿಲ್ಲೆಯ ಜಯಪುರದಿಂದ ನಂದಳಿಕೆಗೆ ಬೆಳಿಗ್ಗೆ ಬಂದಿದ್ದ ಕುಟುಂಬದ ಸದಸ್ಯರು ಮನೆಯಲ್ಲಿ ಪೂಜೆ ಮುಗಿಸಿ ಮಧ್ಯಾಹ್ನದ ಭೋಜನ ಮುಗಿಸಿ ಹಿಂದಿರುವ ಸಂಧರ್ಭದಲ್ಲಿ ಈ ಘಟನೆ ಸಂಭವಿಸಿದೆ
ಅಪಘಾತದಲ್ಲಿ ಮೃತರಾದ ಕುಟುಂಬ ಗುರಿಕಾರ ಶಿವಪ್ಪನವರೇ ಮುಂದೆ ನಿಂತು ದೈವದ ಕೆಲಸದ ವಿಧಿವಿಧಾನಗಳನ್ನು ನಡೆಸಿಕೊಟ್ಟಿದ್ದರು ಎಂದು ತಿಳಿದು ಬಂದಿದೆ.
ಬಸ್ಸಿನಲ್ಲಿದ್ದ 12 ಮಂದಿ ಪ್ರಯಾಣಿಕರು ಗಾಯಗೊಂಡಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಕಾರ್ಕಳ ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಘಟನಾ ಸ್ಥಳಕ್ಕೆ ಅಗಮಿಸಿದ 108 ಆಂಬುಲೆನ್ಸ್ ಸಿಬ್ಬಂದಿ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲು ನೆರವಾದರು.ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿದ್ದು ಪರಿಶೀಲನೆ ನಡೆಸಿದರು.