ಶಿವಮೊಗ್ಗ :ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ಕೈತಪ್ಪಿರುವ ಹಿನ್ನೆಲೆಯಲ್ಲಿ ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಚುನಾವಣಾ ರಾಜಕೀಯಕ್ಕೆ ನಿವೃತ್ತಿ ಘೋಷಿಸಿರುವುದನ್ನು ವಿರೋಧಿಸಿ ಶಿವಮೊಗ್ಗ ಪಾಲಿಕೆಯ ಬಿಜೆಪಿಯ ಸದಸ್ಯರು ರಾಜೀನಾಮೆ ಸಲ್ಲಿಸಿದ್ದಾರೆ.

ಶಿವಮೊಗ್ಗ ಪಾಲಿಕೆಯ ಮೇಯರ್, ಉಪಮೇಯರ್ ಸೇರಿದಂತೆ 19 ಸದಸ್ಯರು ಸಾಮೂಹಿಕ ರಾಜೀನಾಮೆ ಸಲ್ಲಿಸುತ್ತಿದ್ದಾರೆ ಪಕ್ಷದ ವಿವಿಧ ಜವಾಬ್ದಾರಿಗೆ ಸಾಮೂಹಿಕ ರಾಜೀನಾಮೆ ಸಲ್ಲಿಸಿದ್ದಾರೆ. ಬೆಂಗಳೂರಿಗೆ ತೆರಳಿ ಬಿ.ಎಸ್. ಯಡಿಯೂರಪ್ಪ ಭೇಟಿಯಾಗಿ ನಿರ್ಧಾರ ತಿಳಿಸಲು ತೀರ್ಮಾನಿಸಿದ್ದಾರೆ. ಸಾಮೂಹಿಕವಾಗಿ ಶಿವಮೊಗ್ಗ ಬಿಜೆಪಿ ನಗರ ಅಧ್ಯಕ್ಷರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದಾರೆ.

ಕೆ.ಎಸ್. ಈಶ್ವರಪ್ಪ ಚುನಾವಣಾ ರಾಜಕೀಯಕ್ಕೆ ನಿವೃತ್ತಿಯನ್ನು ಘೋಷಣೆ ಮಾಡಿದ್ದಾರೆ. ಈ ಸಂಬಂಧ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ಪತ್ರ ಬರೆದಿರುವಂತ ಅವರು, ತಾವು ಚುನಾವಣಾ ರಾಜಕೀಯದಿಂದ ನಿವೃತ್ತಿಯನ್ನು ಆಗುತ್ತಿರುವುದಾಗಿ ಘೋಷಿಸಿದ್ದಾರೆ. ಅಂದಹಾಗಿ ಈ ಬಾರಿ ತಮ್ಮ ಪುತ್ರ ಕಾಂತೇಶ್ ಗೆ ಶಿವಮೊಗ್ಗ ಕ್ಷೇತ್ರದಿಂದ ವಿಧಾನಸಭಾ ಚುನಾವಣೆಗೆ ಟಿಕೆಟ್ ಕೊಡಿಸೋ ಕಸರತ್ತನ್ನು ತೆರೆ ಮರೆಯಲ್ಲಿ ನಡೆಸುತ್ತಿದ್ದರು. ಈ ಬೆನ್ನಲ್ಲೇ ಅವರು ರಾಜಕೀಯಕ್ಕೆ ಗುಡ್ ಬೈ ಹೇಳಿದ್ದಾರೆ.

