ಬೆಂಗಳೂರು:ಮುಂಬರುವ ಲೋಕಸಭೆ ಚುನಾವಣೆಯ ನಂತರ ಪ್ರಧಾನಿ ನರೇಂದ್ರ ಮೋದಿ ಸತತ ಮೂರನೇ ಬಾರಿಗೆ ಅಧಿಕಾರವನ್ನು ಉಳಿಸಿಕೊಂಡ ನಂತರ ಒಂದು ತಿಂಗಳೊಳಗೆ ಕಾಂಗ್ರೆಸ್ ವಿಭಜನೆಯಾಗಲಿದೆ ಎಂದು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬುಧವಾರ ಹೇಳಿದ್ದಾರೆ.
ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ವೈಫಲ್ಯಗಳನ್ನು ಪ್ರತಿಭಟಿಸಲು ಬಿಜೆಪಿ ಇಲ್ಲಿ ಆಯೋಜಿಸಿದ್ದ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅವರು ಈ ವಿಷಯ ತಿಳಿಸಿದರು. ಈ ಹಿಂದೆ ಯಾವ ಸರಕಾರವೂ ಅಧಿಕಾರದಲ್ಲಿರುವ ಸರಕಾರದಂತೆ ನಾಟಕವಾಡಿಲ್ಲ ಎಂದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಲ್ಲ ಸಿದ್ಧಾಂತ ಮತ್ತು ತತ್ವಗಳನ್ನು ಗಾಳಿಗೆ ತೂರಿ ತಮ್ಮ ಸ್ಥಾನವನ್ನು ಉಳಿಸಿಕೊಳ್ಳಲು ಯತ್ನಿಸುತ್ತಿದ್ದಾರೆ ಎಂದು ಮಾಜಿ ಸಿಎಂ ಕಿಡಿಕಾರಿದರು.
ಯಾವುದೇ ಅಭಿವೃದ್ಧಿ ಕಾಮಗಾರಿ ಕೈಗೊಂಡಿಲ್ಲ, ರೈತರಿಗೆ ಬರ ಪರಿಹಾರ ಹಣ ವಿತರಣೆಯೂ ಆಗಿಲ್ಲ ಎಂದು ಬೊಮ್ಮಾಯಿ ಹೇಳಿದರು. ಯಾವ ನೈತಿಕತೆಯನ್ನಿಟ್ಟುಕೊಂಡು ಸಿಎಂ ಮತ್ತು ಅವರ ತಂಡ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿದೆ ಎಂದರೆ ಅವರಿಗೆ ನಾಚಿಕೆಯಾಗಬೇಕು ಎಂದ ಅವರು, ‘ವಾಸ್ತವವಾಗಿ ಕರ್ನಾಟಕಕ್ಕೆ ಎನ್ ಡಿಎ ಸರ್ಕಾರದಿಂದ 2 ಲಕ್ಷ ಕೋಟಿ ರೂ.ಗೂ ಹೆಚ್ಚು ಹಣ ಬಂದಿದೆ.” ಎಂದರು.
ಬೊಮ್ಮಾಯಿ ಅವರು, ”ಜನರ ದಿಕ್ಕು ತಪ್ಪಿಸುವ ಉದ್ದೇಶದಿಂದ ಖಜಾನೆ ಖಾಲಿ ಮಾಡಿ ದಿಲ್ಲಿಯಲ್ಲಿ ಧರಣಿ ನಡೆಸಿದ್ದಾರೆ. ಸಿಎಂಗೆ ಪ್ರತಿಭಟಿಸುವ ನೈತಿಕ ಹಕ್ಕಿಲ್ಲ. ಕಾಂಗ್ರೆಸ್ ನಾಯಕರು ತಮ್ಮ ದಿಲ್ಲಿ ಚಳವಳಿಯ ಜಾಹೀರಾತಿನಲ್ಲಿ ಮಹಾತ್ಮ ಗಾಂಧಿಯವರ ಚಿತ್ರ ಹಾಕುವ ಮೂಲಕ ಅವಮಾನಿಸಿದ್ದಾರೆ. ವಿಧಾನಸೌಧ ಖಾಲಿಯಾಗಿತ್ತು, ಸರ್ಕಾರ ನಾಪತ್ತೆಯಾಗಿದೆ.” ಎಂದರು.

ಉಡುಪಿ, ಮಂಗಳೂರಿನಲ್ಲಿ ಕೆಲಸ ಬೇಕೇ? ಸರ್ಕಾರಿ, ಅರೆಸರ್ಕಾರಿ, ಖಾಸಗಿ ಕಂಪೆನಿಗಳ ಉದ್ಯೋಗಾವಕಾಶಗಳ ಕುರಿತ ಸಂಪೂರ್ಣ ವಿವರಗಳಿಗೆ ಈ ಲಿಂಕ್ ಕ್ಲಿಕ್ ಮಾಡಿ