Share this news

ಶಹಾಪುರ:ರಾಜ್ಯ ಸರ್ಕಾರದ ಖಜಾನೆ ಖಾಲಿಯಾಗಿದೆ,ಅಭಿವೃದ್ಧಿ ಯೋಜನೆಗಳಿಗೆ ಹಾಗೂ ಬರ ಪರಿಹಾರ ನೀಡಲು ಸರ್ಕಾರದ ಬಳಿ ದುಡ್ಡಿಲ್ಲ ಎನ್ನುವ ಬಿಜೆಪಿ ನಾಯಕರಿಗೆ ಸಚಿವ ಎಚ್.ಕೆ ಪಾಟೀಲ್ ತಿರುಗೇಟು ನೀಡಿದ್ದು, ಬರದಿಂದ ರಾಜ್ಯ ತತ್ತರಿಸಿದ್ದರೂ ಕೇಂದ್ರ ಸರ್ಕಾರ ನಯಾಪೈಸೆ ಹಣ ಬಿಡುಗಡೆ ಮಾಡಿಲ್ಲ ,ಕೇಂದ್ರ ಸರ್ಕಾರದ ಖಜಾನೆ ಸಂಪೂರ್ಣ ಖಾಲಿಯಾಗಿದೆ ಎಂದು ಕುಟುಕಿದ್ಧಾರೆ.

ಐತಿಹಾಸಿ ಪ್ರದೇಶದ ವೀಕ್ಷಣೆಗೆಂದು ಬುಧವಾರ ಯಾದಗಿರಿ ಜಿಲ್ಲೆ ಶಹಾಪುರ ತಾಲೂಕು ಶಿರವಾಳಕ್ಕೆ ಆಗಮಿಸಿದ್ದ ಅವರು, ಮಾಧ್ಯಮಗಳೊಂದಿಗೆ ಮಾತನಾಡಿ, ರಾಜ್ಯ ಸರ್ಕಾರದ ಆರ್ಥಿಕ ಪರಿಸ್ಥಿತಿ ಬಗ್ಗೆ ಮಾಜಿ ಸಿಎಂ ಬಿಎಸ್‌ವೈ ಅವರ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು,ರಾಜ್ಯದಲ್ಲಿ 37 ಸಾವಿರ ಕೋಟಿ ರೂ. ಬೆಳೆ ಹಾನಿಯಾಗಿದೆ. ತಕ್ಷಣವೇ 3 ಸಾವಿರ ಕೋಟಿ ರೂಪಾಯಿ ನೆರವು ನೀಡುವಂತೆ ಕೇಂದ್ರಕ್ಕೆ ನಾವು ಕೋರಿದ್ದರೂ ಕೇಂದ್ರ ಸರ್ಕಾರ ಸ್ಪಂದಿಸುತ್ತಿಲ್ಲ ಎಂದು ಸಚಿವ ಎಚ್.ಕೆ. ಪಾಟೀಲ್ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಯಲ್ಲೇ ಬೀಡುಬಿಟ್ಟು ನಾಲ್ಕು ಬಾರಿ ಪ್ರಧಾನಿ ಭೇಟಿಗೆ ಅವಕಾಶ ಕೋರಿದರೂ ಸಿಗುತ್ತಿಲ್ಲ, ಸಚಿವ ಕೃಷ್ಣ ಬೈರೇಗೌಡ, ಪ್ರಿಯಾಂಕ ಖರ್ಗೆ ತಂಡವು ಪ್ರಧಾನಿ ಮೋದಿ ಸೇರಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಹಾಗೂ ಕೃಷಿ ಮಂತ್ರಿ ಭೇಟಿಗೆ ಪ್ರಯತ್ನಿಸಿದರೂ ಭೇಟಿ ಆಗಲಿಲ್ಲ ಎಂದು ಸಚಿವ ಪಾಟೀಲ್ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಮುಂಗಾರು ಬೆಳೆ ಸಂಪೂರ್ಣ ಹಾಳಾಗಿದ್ದರೂ ನೈಯಾಪೈಸೆ ಪರಿಹಾರ ಕೇಂದ್ರದಿಂದ ಬಿಡುಗಡೆ ಮಾಡಿಲ್ಲ. ಆರ್ಥಿಕ ಅಡಚಣೆ ನಡುವೆಯೂ ನಮ್ಮ ರಾಜ್ಯ ಸರ್ಕಾರ ವಿವಿಧ ಯೋಜನೆಗಳ ಮೂಲಕ ಶೇ.92-93 ರಷ್ಟು ಫಲಾನುಭವಿಗಳಿಗೆ ಸರ್ಕಾರದ ವಿವಿಧ ಯೋಜನೆಗಳಲ್ಲಿ ಹಣ ನೀಡಿದೆ ಎಂದ ಸಚಿವ ಎಚ್‌.ಕೆ. ಪಾಟೀಲ್‌, ನಮ್ಮ ರಾಜ್ಯದ್ದಲ್ಲ, ನಿಮ್ಮ ಕೇಂದ್ರ ಸರ್ಕಾರದ ಖಜಾನೆ ಖಾಲಿಯಾಗಿದೆ.ಯಡಿಯೂರಪ್ಪನವರು ಈ ಬಗ್ಗೆ ಎಚ್ಚರಿಕೆಯಿಂದ ಮಾತನಾಡಬೇಕು ಎಂದು ತಾಕೀತು ಮಾಡಿದರು.

ಆರ್ಥಿಕ ಅಡಚಣೆ ಆಗಿದ್ದರೂ ಸೂಕ್ತ ವ್ಯವಸ್ಥೆ ಮಾಡಿಕೊಂಡು, ನಮ್ಮ ಸರ್ಕಾರ ಜನರಿಗೆ ಕೊಟ್ಟ ಗ್ಯಾರಂಟಿಗಳನ್ನು ಈಡೇರಿಸುತ್ತದೆ ಎಂದರು.
ಕೇಂದ್ರದ ಬರ ಅಧ್ಯಯನ ತಂಡ ರಾಜ್ಯದಲ್ಲಿ ಬರ ಅಧ್ಯಯನ ನಡೆಸಿದೆ. ಈ ಬಗ್ಗೆ ಏನು ಕ್ರಮ ಕೈಗೊಳ್ಳಲಾಗಿದೆ. ಬರ ಇಲ್ಲವೆಂದು ವರದಿ ಕೊಡುತ್ತೀರಾ ಎಂದು ಕೇಂದ್ರವನ್ನು ಟೀಕಿಸಿದ ಪಾಟೀಲ್‌, ದೆಹಲಿಗೆ ಹೋಗಿ ರಾಜ್ಯಕ್ಕೆ ಬರ ಪರಿಹಾರ ನೀಡುವಂತೆ ಹೇಳಲು ಸಂಸದರಿಗೆ ಆಗುವುದಿಲ್ಲವೇ, ನಾಚಿಕೆಯಾಗಬೇಕು ಎಂದರು.

 

 

 

 

 

 

 

 

Leave a Reply

Your email address will not be published. Required fields are marked *