Share this news

ಮಂಗಳೂರು: ಕೇರಳದಲ್ಲಿ ಆಫ್ರಿಕನ್ ಹಂದಿ ಜ್ವರ ಪ್ರಕರಣಗಳು ದೃಢಪಟ್ಟಿದ್ದು, ರಾಜ್ಯದಲ್ಲಿ ಹರಡದಂತೆ ಗಡಿ ಪ್ರದೇಶವಾದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ.

ಆಫ್ರಿಕನ್ ಹಂದಿ ಜ್ವರವು ಒಂದು ಸಾಂಕ್ರಾಮಿಕ ರೋಗವಾಗಿದ್ದು, ಇದು ದೇಶೀಯ ಮತ್ತು ಕಾಡು ಹಂದಿಗಳಿAದ ಹರಡುತ್ತದೆ. ಈ ಕಾಯಿಲೆಯಿಂದ ಹಂದಿಗಳು ಸಾಯುತ್ತವೆ. ಈ ಜ್ವರಕ್ಕೆ ಯಾವುದೇ ನಿರ್ದಿಷ್ಟ ವ್ಯಾಕ್ಸಿನೇಷನ್ ಲಭ್ಯವಿಲ್ಲ. ಜ್ವರ ದೃಢಪಟ್ಟ ಸ್ಥಳದ ಒಂದು ಕಿ.ಮೀ. ಪ್ರದೇಶದಲ್ಲಿ ಮತ್ತು ಸುತ್ತಮುತ್ತಲಿನ ಹಂದಿಗಳನ್ನು ಕೊಲ್ಲುವುದು ಮಾತ್ರ ಸದ್ಯ ಅನುಸರಿಸುವ ವಿಧಾನವಾಗಿದೆ.

ಈವರೆಗೆ ದಕ್ಷಿಣ ಕನ್ನಡದಲ್ಲಿ ಯಾವುದೇ ಪ್ರಕರಣ ವರದಿಯಾಗಿಲ್ಲ ಎಂದು ಪಶುಸಂಗೋಪನಾ ಅಧಿಕಾರಿಗಳು ತಿಳಿಸಿದ್ದಾರೆ. ಆದರೆ, ಕೇರಳದ ಗಡಿಯಲ್ಲಿರುವ ತಲಪಾಡಿ, ಜಾಲ್ಸೂರು ಮತ್ತು ಸಾರಡ್ಕ ಚೆಕ್ ಪೋಸ್ಟ್ಗಳಲ್ಲಿ ಕಟ್ಟುನಿಟ್ಟಿನ ನಿಗಾ ಇರಿಸಲಾಗಿದೆ. ದಕ್ಷಿಣ ಕನ್ನಡದಿಂದ ಕೇರಳಕ್ಕೆ ಹಂದಿ ಮಾಂಸವನ್ನು ಹೆಚ್ಚಿನ ಪ್ರಮಾಣದಲ್ಲಿ ಕಳುಹಿಸಲಾಗುತ್ತದೆ. ಕೇರಳಕ್ಕೆ ಹಂದಿ ಮಾಂಸ ಪೂರೈಸಿ ಹಿಂತಿರುಗುತ್ತಿರುವ ವಾಹನಗಳಿಗೆ ರಾಸಾಯನಿಕ ಸಿಂಪಡಿಸಲಾಗುತ್ತದೆ. ಹಂದಿಗಳು ಮತ್ತು ಹಂದಿ ಸಾಗಣೆಯ ಮೇಲೂ ನಿಗಾ ವಹಿಸಲಾಗಿದೆ. ಎಲ್ಲಾ ಪಶುವೈದ್ಯರು ತಮ್ಮ ವ್ಯಾಪ್ತಿಯ ಹಂದಿ ಸಾಕಣೆ ಕೇಂದ್ರಗಳಿಗೆ ಭೇಟಿ ನೀಡಿ ಹಂದಿ ಸಾಕಣೆದಾರರಿಗೆ ಸೂಕ್ತ ಸಲಹೆ ನೀಡುವಂತೆ ಸೂಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

Leave a Reply

Your email address will not be published. Required fields are marked *