ಬೆಂಗಳೂರು: ಕೇರಳದಲ್ಲಿ ನಿಫಾ ವೈರಸ್ ಹೆಚ್ಚಳ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯದಲ್ಲಿ ಆರೋಗ್ಯ ಇಲಾಖೆ ಅಲರ್ಟ್ ಘೋಷಿಸಿದೆ.
ಪ್ರಮುಖವಾಗಿ ಕೇರಳದ ಗಡಿ ಪ್ರದೇಶವಾದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವಿಶೇಷ ಅಲರ್ಟ್ ಘೋಷಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಖಾಸಗಿ ಹಾಗೂ ಸರ್ಕಾರಿ ಆಸ್ಪತ್ರೆಗಳಲ್ಲಿ ಶಂಕಿತ ಪ್ರಕರಣಗಳನ್ನು ದಾಖಲಿಸಿಕೊಂಡು ಸೂಕ್ತ ಚಿಕಿತ್ಸೆ ನೀಡಲು ಸೂಚನೆ ನೀಡಿದೆ.
ಅಲ್ಲದೆ ಶಂಕಿತ ಪ್ರಕರಣದ ಕುರಿತು ಕಣ್ಗಾವಲು ಕಚೇರಿಗೆ ಮಾಹಿತಿ ನೀಡಬೇಕು. ಜಿಲ್ಲಾ, ತಾಲೂಕು ಆಸ್ಪತ್ರೆಗಳಲ್ಲಿ ಪ್ರತ್ಯೇಕ 10 ಹಾಸಿಗೆಯ ವಾರ್ಡ್ಗಳನ್ನು ತೆರೆಯಬೇಕು ಎಂದು ಆರೋಗ್ಯ ಇಲಾಖೆ ಸುತ್ತೋಲೆ ಹೊರಡಿಸಿದೆ.