ತಿರುವನಂತಪುರಂ: ಪ್ರಧಾನಿ ನರೇಂದ್ರ ಮೋದಿ ಅವರ ಕೇರಳ ಪ್ರವಾಸದ ವೇಳೆ ಆತ್ಮಾಹುತಿ ದಾಳಿ ನಡೆಯಲಿದೆ ಎಂದು ಕೇರಳ ಬಿಜೆಪಿ ರಾಜ್ಯ ಸಮಿತಿ ಕಚೇರಿಗೆ ಪತ್ರವೊಂದು ಬಂದಿದೆ. ಬೆದರಿಕೆ ಪತ್ರದ ಬಗ್ಗೆ ಕೇರಳ ಪೊಲೀಸರು ಮತ್ತು ಗುಪ್ತಚರ ಸಂಸ್ಥೆಗಳು ತಮ್ಮ ತನಿಖೆಯನ್ನು ತೀವ್ರಗೊಳಿಸಿವೆ. ಎರ್ನಾಕುಲಂ ಮೂಲದ ಜೋಸೆಫ್ ಜಾನ್ ನಡುಮುತಮಿಲ್ ಎಂಬ ವ್ಯಕ್ತಿಯಿಂದ ಇದನ್ನು ಕಳುಹಿಸಲಾಗಿದೆ ಎನ್ನಲಾಗಿದೆ.
ಈ ಘಟನೆ ಶನಿವಾರ ಬೆಳಿಗ್ಗೆಬೆಳಕಿಗೆ ಬಂ ದಿದೆ. ಪ್ರಧಾನಿ ನರೇಂದ್ರ ಮೋದಿ ಸೋಮವಾರ ಸಂಜೆ 5 ಗಂಟೆಗೆ ಕೇರಳಕ್ಕೆ ಭೇಟಿ ನೀಡಲಿದ್ದಾರೆ. ಕೇರಳದಲ್ಲಿ ವಂದೇ ಭಾರತ್ ಎಕ್ಸ್ಪ್ರೆಸ್ಗೆ ಹಸಿರು ನಿಶಾನೆ ತೋರಿಸುವುದು ಸೇರಿದಂತೆ ತಮ್ಮ ಎರಡು ದಿನಗಳ ಭೇಟಿಯಲ್ಲಿ ಅವರು ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
ಪ್ರಧಾನಿ ಮೋದಿ ಮಧ್ಯಪ್ರದೇಶದಿಂದ ವಾಯುಪಡೆಯ ವಿಶೇಷ ವಿಮಾನದಲ್ಲಿ ರಾಜ್ಯಕ್ಕೆ ಆಗಮಿಸಲಿದ್ದಾರೆ. ಐದು ಗಂಟೆಯ ಹೊತ್ತಿಗೆ ಅವರು ಬಿಜೆಪಿ ರೋಡ್ ಶೋನಲ್ಲಿ ಭಾಗವಹಿಸಲಿದ್ದಾರೆ. ರೋಡ್ ಶೋ ನಡೆಸಿ ನಂತರ ದೇವರ ಸೇಕ್ರೆಡ್ ಹಾರ್ಟ್ ಕಾಲೇಜು ಮೈದಾನದಲ್ಲಿ ಬಿಜೆಪಿ ನೇತೃತ್ವದ ಯುವ ಸಂಘಟನೆಗಳು ಆಯೋಜಿಸಿರುವ ‘ಯುವಂ’ ಸಮಾವೇಶವನ್ನು ಉದ್ಘಾಟಿಸಲಿದ್ದಾರೆ.