Share this news

ಕೊಲ್ಲೂರ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಅವರು ಗುರುವಾರ ತಮ್ಮ ಕುಟುಂಬದ ಸದಸ್ಯರ ಜತೆಗೆ ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ, ದೇವರ ದರ್ಶನ ಪಡೆದರು.

ಮಧ್ಯಾಹ್ನ 1.30ರ ವೇಳೆ ಆಗಮಿಸಿದ ಸಚಿವರನ್ನು ದೇವಸ್ಥಾನದ ಆಡಳಿತ ಮಂಡಳಿ ವತಿಯಿಂದ ಸ್ವಾಗತಿಸಲಾಯಿತು. ನಾಡಿನ ಒಳಿತಿಗಾಗಿ ಮೂಕಾಂಬಿಕಾ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ದೇವಸ್ಥಾನದ ಆಡಳಿತ ಮಂಡಳಿ ವತಿಯಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಅವರ ಪುತ್ರ ಮೃಣಾಲ್‌ ಹೆಬ್ಬಾಳ್ಕರ್ ಅವರನ್ನು ಗೌರವಿಸಲಾಯಿತು.

ಸೆಲ್ಫಿಗೆ ಮುಗಿಬಿದ್ದ ಅಭಿಮಾನಿಗಳು:

ಸಚಿವರನ್ನು ದೇವಸ್ಥಾನದ ಆವರಣದಲ್ಲಿ ಕಂಡ ತಕ್ಷಣ ಅಭಿಮಾನಿಗಳು ಸೆಲ್ಫಿ ತೆಗೆಸಿಕೊಳ್ಳಲು ಮುಗಿಬಿದ್ದರು. ಅಭಿಮಾನಿಗಳು ಲಕ್ಷ್ಮೀ ಹೆಬ್ಬಾಳ್ಕರ್ ಜತೆ ನಿಂತು ಫೋಟೋ ತೆಗೆಸಿಕೊಂಡರು. ಸಚಿವರ ಭೇಟಿ ಹಿನ್ನೆಲೆ ದೇವಸ್ಥಾನದ ಆಡಳಿತ ಮಂಡಳಿ ವತಿಯಿಂದ ಬಿಗಿ ಭದ್ರತೆ ಏರ್ಪಡಿಸಲಾಗಿತ್ತು.

ಉಡುಪಿ, ಮಂಗಳೂರಿನಲ್ಲಿ ಕೆಲಸ ಬೇಕೇ? ಸರ್ಕಾರಿ, ಅರೆಸರ್ಕಾರಿ, ಖಾಸಗಿ ಕಂಪೆನಿಗಳ ಉದ್ಯೋಗಾವಕಾಶಗಳ ಕುರಿತ ಸಂಪೂರ್ಣ ವಿವರಗಳಿಗೆ ಈ  ಲಿಂಕ್ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *