Share this news

ಮಂಗಳೂರು : ಬೆಂಗಳೂರಿನ ಕೆ.ಆರ್.ಪುರಂ ತಹಶಿಲ್ದಾರ್ ಅಜಿತ್ ಕುಮಾರ್ ರೈ ಮಾಲಾಡಿ ಅವರ ಮನೆಗೆ ಲೋಕಾಯುಕ್ತ ದಾಳಿ ನಡೆದಿದೆ. ಕೋಟ್ಯಂತರ ರೂ ಅಕ್ರಮ ಆಸ್ತಿ, ಲಕ್ಷಾಂತರ ರೂ ಹಣ, ಕೆ.ಜಿ ಗಟ್ಟಲೆ ಆಭರಣಗಳು, ಬೆಲೆಬಾಳುವ ವಿದೇಶಿ ಮದ್ಯ, ಐಶಾರಾಮಿ ಕಾರು, ಚಂದ್ರಾಲೇಔಟ್ ನಿವಾಸದಲ್ಲಿ 40 ಲಕ್ಷ ನಗದು, ವಾಚ್ ಗಳು ಸೇರಿ ಐಷಾರಾಮಿ ವಸ್ತುಗಳು ಹಾಗೂ ದಾಖಲೆಗಳು ಇತ್ಯಾದಿ ಅಜಿತ್ ಮನೆಯಲ್ಲಿ ಪತ್ತೆಯಾಗಿದೆ. ಅಜಿತ್ ಆಪ್ತರ ಮನೆ, ಸಹೋದರನ ಮನೆ. ಆತನ ಹುಟ್ಟೂರು ಸೇರಿ ಹಲವು ಕಡೆ ಈ ದಾಳಿ ನಡೆದಿದ್ದು, ಹಲವು ಮಹತ್ವದ ದಾಖಲೆಯನ್ನು ಲೋಕಾಯುಕ್ತ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಮೂಲತಃ ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕಿನ ಸೊರಕೆಯ ಅಜಿತ್ ಕುಮಾರ್ ರೈ ಅವರ ತಂದೆ ದಿ.ಆನಂದ್ ರೈ ಸರ್ಕಾರಿ ಸರ್ವೇಯರ್ ಆಗಿ ಕೆಲಸ ಮಾಡುತ್ತಿದ್ದರು. ತಂದೆಯ ಮರಣ ನಂತರ ಅನುಕಂಪದ ಆಧಾರದಲ್ಲಿ ಅಜಿತ್ ರೈಗೆ ಸರ್ಕಾರಿ ಕೆಲಸ ಸಿಕ್ಕಿತ್ತು. ಸಣ್ಣ ವಯಸ್ಸಿನಲ್ಲೇ ಕಂದಾಯ ನಿರೀಕ್ಷಕರಾಗಿ ಆಗಿ ಬೆಂಗಳೂರಿನಲ್ಲೇ ಸರ್ಕಾರಿ ಕೆಲಸಕ್ಕೆ ನೇಮಕವಾಗಿದ್ದರು. ಅಲ್ಲಿಂದ ಭಡ್ತಿ ಪಡೆದು ಉಪ ತಹಶೀಲ್ದಾರ್ ಬಳಿಕ ತಹಶಿಲ್ದಾರ್ ಹುದ್ದೆಗೆ ನೇಮಕವಾಗಿದ್ದರು. ಸರ್ಕಾರಿ ಕೆಲಸದಲ್ಲಿ ಬಹುತೇಕ ದಕ್ಷಿಣ ಕನ್ನಡ ಜಿಲ್ಲೆಯ ಹೊರಗೆ ಅಜಿತ್ ರೈ ಪೋಸ್ಟಿಂಗ್ ಆಗಿದ್ದರು. ಹೀಗಾಗಿ ಅಜಿತ್ ರೈ ದ.ಕ ಜಿಲ್ಲೆಯ ಹೊರಗೆ ಬೆಂಗಳೂರು ಸೇರಿ ಹಲವಡೆ ಕೋಟ್ಯಂತರ ರೂ ಆಸ್ತಿ ಮಾಡಿಟ್ಟಿದ್ದಾರೆ. ಇಂದು ಪುತ್ತೂರಿನಲ್ಲಿರೋ ಮನೆ ಮೇಲೂ ಮಂಗಳೂರು ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಬಿಬಿಎಂಪಿ ಕೈಗೊಂಡಿದ್ದ ಒತ್ತುವರಿ ತೆರವು ಕಾರ್ಯಾಚರಣೆಗೆ ಸಹಕರಿಸಿದ ಅರೋಪದಡಿ ಬೆಂಗಳೂರು ಪೂರ್ವ ತಾಲೂಕಿನ (ಕೆ.ಆರ್.ಪುರ) ತಹಶೀಲ್ದಾರ್ ಆಗಿದ್ದ ಅಜಿತ್ ಕುಮಾರ್ ರೈಯನ್ನ ಸರ್ಕಾರ 2022, ನವೆಂಬರ್ ನಲ್ಲಿ ಅಮಾನತು ಮಾಡಲಾಗಿತ್ತು. ಬಿಬಿಎಂಪಿ ವತಿಯಿಂದ ಮಹದೇವಪುರದಲ್ಲಿ ಒತ್ತುವರಿ ತೆರವು ಕಾರ್ಯಾಚರಣೆ ಮಾಡುತ್ತಿದ್ದರೂ ಇದಕ್ಕೆ ಕಾನೂನಾತ್ಮಕವಾಗಿ ತೊಡಕು ಉಂಟಾಗುತ್ತಿತ್ತು. ಈ ಪ್ರಕರಣದಲ್ಲಿ ತಹಶೀಲ್ದಾರ್ ಎಸ್. ಅಜಿತ್ ಕುಮಾರ್ ರೈ ಒತ್ತುವರಿದಾರರಿಗೆ ಸಹಕಾರ ನೀಡುವ ಮೂಲಕ ಕಾನೂನಾತ್ಮಕವಾಗಿ ತೆರವು ಮಾಡದಂತೆ ನೋಡಿಕೊಂಡಿದ್ದರು. ಒತ್ತುವರಿ ತೆರವು ಕಾರ್ಯಕ್ಕೆ ತಹಶೀಲ್ದಾರ್ ವತಿಯಿಂದ ನಿರಂತರ ತಕರಾರು ಉಂಟಾಗುವAತೆ ಮಾಡಿದ್ದರು. ಜತೆಗೆ ಒತ್ತುವರಿದಾರರು ನ್ಯಾಯಾಲಯಗಳಿಂದ ಸ್ಟೇ ಆದೇಶ ತರಲು ಕೂಡ ನೆರವಾಗಿದ್ದರು. ಆದರೆ ಅಮಾನತು ಆದೇಶದ ವಿರುದ್ದ ಕೆ.ಎಟಿಯಲ್ಲಿ ಪ್ರಶ್ನಿಸಿ ತಡೆ ತೆರವು ಮಾಡಿದ್ದ ಅಜಿತ್ ರೈ ಮತ್ತೆ ಬೆಂಗಳೂರು ಪೂರ್ವ ತಾಲೂಕಿನ (ಕೆ.ಆರ್.ಪುರ) ತಹಶೀಲ್ದಾರ್ ಆಗಿ ನೇಮಕಗೊಂಡಿದ್ದರು.

ಸಹಕಾರ ನಗರದಲ್ಲಿ ಅಜಿತ್ ರೈ ಐಷಾರಾಮಿ ಅಪಾರ್ಟ್ಮೆಂಟ್ ನಲ್ಲಿ ದಾಳಿ ನಡೆದಿದೆ. ಸಹಕಾರನಗರದ ಪಾರ್ಚೂನ್ ಸೆಂಟರ್ ಅಪಾರ್ಟ್ಮೆಂಟ್ ನಲ್ಲಿ ವಾಸವಿದ್ದು, ಅಂತರಾಷ್ಟ್ರೀಯ ವಿಮಾನ ನಿಲ್ದಾಣ ರಸ್ತೆಯ ಐಟಿಸಿ ಪಾರ್ಕ್ ಬಳಿ ಈ ಮನೆ ಇದೆ. ಅಪಾರ್ಟ್ಮೆಂಟ್ ನಲ್ಲಿ ಮೂರು ಪ್ಲಾಟ್ ಗಳು ಇದ್ದು, ಒಂದು ಪ್ಲಾಟ್ ಅಂದಾಜು ಮೂರು ಕೋಟಿ ಮೌಲ್ಯ ಹೊಂದಿದೆ. ಮೊದಲನೇ ಮಹಡಿಯಲ್ಲಿ ತಹಸೀಲ್ದಾರ್ ಅಜಿತ್ ರೈ ವಾಸವಿದ್ದು, ಕೋಟಿ ಕೋಟಿ ಖರ್ಚು ಮಾಡಿ ಇಂಟಿರಿಯರ್ ಮಾಡಿಸಿದ್ದಾರೆ.
ಸಹಕಾರ ನಗರದ ಅಜೀತ್ ರೈ ಮನೆಯಲ್ಲಿ 5 ಸಾವಿರದಿಂದ 1 ಲಕ್ಷದವರೆಗಿನ ಮೌಲ್ಯದ ಲಿಕ್ಕರ್ ಬಾಟಲ್‌ಗಳು ಪತ್ತೆಯಾಗಿದೆ.

ಲೋಕಾಯುಕ್ತ ಡಿವೈಎಸ್ಪಿ ಪ್ರಮೋದ್ ನೇತೃತ್ವದಲ್ಲಿ ನಾಲ್ಕು ಕಾರುಗಳಲ್ಲಿ ಬೆಳ್ಳಂಬೆಳಗ್ಗೆ 4.30ರ ಸಮಯದಲ್ಲಿ ಅಜಿತ್ ರೈ ಮನೆ ಮೇಲೆ ದಾಳಿ ನಡೆದಿದೆ. ಸುಮಾರು 15 ಕ್ಕೂ ಹೆಚ್ಚು ಅಧಿಕಾರಿಗಳು ಅಜಿತ್ ರೈ ವಾಕಿಂಗ್ ಹೋಗುವ ಮುನ್ನ ದಾಳಿ ಮಾಡಿದ್ದು, ಅಜಿತ್ ರೈ ವಾಕಿಂಗ್ ಹೋಗಿದ್ದರೆ ತಪ್ಪಿಸಿಕೊಳ್ಳುವ ಸಾಧ್ಯತೆ ಇತ್ತು. ಅಜಿತ್ ಮನೆಯ ಪಾರ್ಕಿಂಗ್ ನಲ್ಲಿ ಬೈಕ್ ಹಾಗೂ ಕಾರ್ ಗಳ ತಪಾಸಣೆ ನಡೆದಿದೆ. ಐಶಾರಾಮಿ ಕಾರು, ಜೀಪ್ ಪತ್ತೆಯಾಗಿದೆ. ಇದಲ್ಲದೆ, ಮಂಗಳೂರಿನ ಕೇಯೂರು ನಲ್ಲಿರುವ ತಾಯಿ ಮನೆ, ದೇವನಹಳ್ಳಿಯ ಇಳತ್ತೋರೆ ನಲ್ಲಿರುವ ಮನೆ, ದೊಡ್ಡಬಳ್ಳಾಪುರದಲ್ಲಿ ಅಜಿತ್ ಗೆ ಸಂಬAಧಿಸಿದ ಮನೆ, ಚಂದ್ರಾಲೇಔಟ್ ಮನೆಯಲ್ಲಿ ದಾಳಿ ನಡೆದಿದೆ.

ಇನ್ನು ತಹಶಿಲ್ದಾರ್ ಅಜಿತ್ ರೈಗೆ ಆಪ್ತನಾಗಿರುವ ಗೌರವ್ ಶೆಟ್ಟಿ ಮನೆ ಮೇಲೂ ದಾಳಿ ನಡೆದಿದೆ. ಬಸವೇಶ್ವರ ನಗರದ ಗೌರವ್ ಶೆಟ್ಟಿ ನೆ ಮೇಲೆ ದಾಳಿ ನಡೆದಿದ್ದು, ಬೆನಾಮಿ ಆಸ್ತಿ ಪತ್ತೆಯಾಗಿದೆ. ಇಷ್ಟು ಮಾತ್ರವಲ್ಲದೆ ಅಜಿತ್ ರೈ ಸಂಬAಧಿಕರು,ಕುಟುAಬಸ್ಥರು ಸೇರಿದಂತೆ ಆಪ್ತ ವಲಯದ ಹಲವು ಕಡೆ ದಾಳಿ ನಡೆದಿದೆ.

Leave a Reply

Your email address will not be published. Required fields are marked *