Share this news

ಬೆಂಗಳೂರು: ಮೇಕೆದಾಟು ಪಾದಯತ್ರೆ ವೇಳೆ ಕೋವಿಡ್ ನಿಯಮ ಉಲ್ಲಂಘನೆ ಪ್ರಕರಣಕ್ಕೆ ಕುರಿತಂತೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರಿಗೆ ಜಾಮೀನು ರಹಿತ ವಾರೆಂಟ್ ಜಾರಿ ಮಾಡಲಾಗಿದೆ.
ರಾಮಲಿಂಗಾ ರೆಡ್ಡಿ ಕೋವಿಡ್ ನಿಯಮ ಉಲ್ಲಂಘನೆ ಮಾಡಿದ್ದ ಆರೋಪದ ಹಿನ್ನೆಲೆಯಲ್ಲಿ ವಿಪತ್ತು ನಿರ್ವಹಣಾ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿತ್ತು.ಈ ಪ್ರಕರಣ ಸಂಬಂಧ ವಿಚಾರಣೆಗೆ ಹಾಜರಾಗದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿದೆ. ರಾಮಲಿಂಗಾ ರೆಡ್ಡಿ ವಿರುದ್ಧ ಪೊಲೀಸರು ಚಾರ್ಜ್​ಶೀಟ್ ಸಲ್ಲಿಕೆ ಮಾಡಿದ್ದರು. ಈ ಪ್ರಕರಣದ ವಿಚಾರಣೆಗೆ ಹಾಜರಾಗುವಂತೆ ಸಮನ್ಸ್ ಜಾರಿಯಾಗಿದ್ದರೂ ರಾಮಲಿಂಗಾರೆಡ್ಡಿ ನ್ಯಾಯಾಲಯಕ್ಕೆ ಗೈರಾದ ಹಿನ್ನೆಲೆಯಲ್ಲಿ ನ್ಯಾಯಾಧೀಶ ಜೆ.ಪ್ರೀತ್ ಅವರು ಜಾಮೀನು ರಹಿತ ವಾರೆಂಟ್ ಜಾರಿ ಮಾಡಿ ಆದೇಶ ಹೊರಡಿಸಿದ್ದಾರೆ.

Leave a Reply

Your email address will not be published. Required fields are marked *