ಉಡುಪಿ: ದೀಪಾವಳಿ ಪೂಜೆ ಸಂದರ್ಭದಲ್ಲಿ ಸಿಡಿಸಿದ ಪಟಾಕಿಯ ಬೆಂಕಿಯಿಂದ ಸುಮಾರು 6 ಕ್ಕೂ ಅಧಿಕ ಬೋಟ್‌ಗಳು ಅಗ್ನಿಗೆ ಆಹುತಿಯಾಗಿ ಕೋಟ್ಯಾಂತರ ರೂ ನಷ್ಟ ಸಂಭವಿಸಿದೆ.
ಉಡುಪಿ ಜಿಲ್ಲೆಯ ಗಂಗೊಳ್ಳಿಯಲ್ಲಿ ಸೋಮವಾರ ಮುಂಜಾನೆ ಈ ಅವಘಡ ನಡೆದಿದೆ. ಬೆಂಕಿ ನಂದಿಸಲು ಸ್ಥಳೀಯರು ಹಾಗೂ ಅಗ್ನಿ ಶಾಮಕ ದಳದವರು ಹರಸಾಹಸ ಪಟ್ಟು ಸುಮಾರು 5 ಗಂಟೆಗಳ ಕಾರ್ಯಾಚರಣೆ ನಡೆಸಿ ಬೆಂಕಿ ಹತೋಟಿಗೆ ತಂದಿದ್ದಾರೆ. ಬೆಂಕಿಯ ಕೆನ್ನಾಲಿಗೆಗೆ ಲಂಗರು ಹಾಕಿದ್ದ ಬೋಟ್ ಗಳು ಹೊತ್ತಿ ಉರಿದು ಸುಮಾರು 5 ಕೋಟಿಗೂ ಮಿಕ್ಕಿ ನಷ್ಟ ಸಂಭವಿಸಿದೆ. ಸ್ಥಳದಲ್ಲಿ ಆತಂಕದ ಸ್ಥಿತಿ ನಿರ್ಮಾಣವಾಗಿದ್ದು, ಸಮುದ್ರ ತೀರದಲ್ಲಿ ಗಾಳಿಯ ಆರ್ಭಟಕ್ಕೆ ಬೆಂಕಿಯ ಜ್ವಾಲೆ ಮತ್ತಷ್ಟು ಹೆಚ್ಚಾಗಲು ಕಾರಣವಾಯಿತು. ಈಗಾಗಲೇ 6ಕ್ಕೂ ಅಧಿಕ ಬೋಟ್‌ಗಳು ಬೆಂಕಿಗೆ ಆಹುತಿಯಾಗಿವೆ.
ಎರಡು ಅಗ್ನಿಶಾಮಕ ದಳದ ವಾಹನಗಳು ಬೆಂಕಿ ನಂದಿಸುವ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದು, ಇವರಿಗೆ ಸ್ಥಳೀಯರು ಸಹಕಾರ ನೀಡುವ ಮೂಲಕ ಬೆಂಕಿ ನಂದಿಸುವ ಕಾರ್ಯಾಚರಣೆಗೆ ಸಹಕರಿಸಿದರು.




