ಚತ್ತೀಸ್‌ಘಡ: ಕೋವಿಡ್ ಸಂದರ್ಭದಲ್ಲಿ ಆರಂಭಗೊAಡ ಉಚಿತ ಪಡಿತರ ಕಾರ್ಯಕ್ರಮ ಗರೀಬ್ ಕಲ್ಯಾಣ್ ಯೋಜನೆಯನ್ನು ಮುಂದಿನ 5 ವರ್ಷಕ್ಕೆ ವಿಸ್ತರಿಸುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ. 2028ರ ವರೆಗೆ ಬರೋಬ್ಬರಿ 80 ಕೋಟಿ ಭಾರತೀಯರಿಗೆ ಪ್ರತಿ ತಿಂಗಳು 5 ಕೆಜಿ ಗೋಧಿ ಅಥವಾ ಅಕ್ಕಿ ವಿತರಣೆ ಯೋಜನೆ ವಿಸ್ತರಣೆಯಾಗಲಿದೆ ಎಂದು ಮೋದಿ ಹೇಳಿದ್ದಾರೆ. ಚತ್ತೀಸಘಡ ಚುನಾವಣಾ ರ‍್ಯಾಲಿಯಲ್ಲಿ ಮಾತನಾಡಿದ ಮೋದಿ, ಈ ಮಹತ್ವದ ಘೋಷಣೆ ಮಾಡಿದ್ದಾರೆ.

ಭಾರತದ 8 ಕೋಟಿ ಜನರು ಗರೀಬ್ ಕಲ್ಯಾಣ್ ಯೋಜನೆಯ ಫಲಾನುಭವಿಗಳಾಗಿದ್ದಾರೆ. ಕೋವಿಡ್ ನಿಯಂತ್ರಣದ ಬಳಿಕವೂ ಈ ಯೋಜನೆ ವಿಸ್ತರಣೆಯಾಗತ್ತಲೇ ಬಂದಿತ್ತು. ಕೊನೆಯದಾಗಿ ಕೇಂದ್ರ ಕ್ಯಾಬಿನೆಟ್ ಸಭೆ ನಡೆಸಿ ಗರೀಬ್ ಕಲ್ಯಾಣ್ ಯೋಜನೆಯ್ನು ಡಿಸೆಂಬರ್ 2023ರ ವರಗೆ ವಿಸ್ತರಿಸಲು ಅನುಮೋದನೆ ನೀಡಿತ್ತು. ಇದೀಗ ಈ ಯೋಜನೆಯನ್ನು ಮತ್ತೆ 5 ವರ್ಷಕ್ಕೆ ವಿಸ್ತರಿಸುವುದಾಗಿ ಮೋದಿ ಘೋಷಿಸಿದ್ದಾರೆ.

2020ರ ಮಾರ್ಚ್ನಲ್ಲಿ ಈ ಯೋಜನೆಯನ್ನು 3 ತಿಂಗಳಿಗೆAದು ಘೋಷಿಸಲಾಗಿತ್ತು. ಎರಡನೇ ಹಂತದಲ್ಲಿ 2020ರ ಜುಲೈ-ನವೆಂಬರ್‌ಗೆ, 3ನೇ ಹಂತದಲ್ಲಿ 2021-ರ ಮೇ- ಜೂನ್‌ಗೆ, 4ನೇ ಹಂತದಲ್ಲಿ 2021ರ ಜುಲೈ-ನವೆಂಬರ್, 5ನೇ ಹಂತದಲ್ಲಿ 2021ರ ಡಿಸೆಂಬರ್‌ನಿAದ 2022ರ ಮಾರ್ಚ್ಗೆ ವಿಸ್ತರಣೆ ಮಾಡಲಾಗಿತ್ತು. 6ನೇ ಹಂತದಲ್ಲಿ 2022ರ ಮಾರ್ಚ್ನಿಂದ -ಸೆಪ್ಟೆಂಬರ್ ವರೆಗೆ ವಿಸ್ತರಣೆ ಮಾಡಲಾಗಿತ್ತು. ಬಳಿಕ ಡಿಸೆಂಬರ್‌ಗೆ ಮುಂದುವರಿಸಲಾಗಿತ್ತು. ಡಿಸೆಂಬರ್ 2022ರಲ್ಲಿ ಮತ್ತೆ ಕ್ಯಾಬಿನೆಟ್ ಸಭೆ ನಡೆಸಿದ ಪ್ರಧಾನಿ ಮೋದಿ, ಒಂದು ವರ್ಷಕ್ಕೆ ವಿಸ್ತರಣೆ ಮಾಡಿದ್ದರು. 2023ರ ಡಿಸೆಂಬರ್ ಅಂತ್ಯದ ವರೆಗೆ ಯೋಜನೆ ವಿಸ್ತರಿಸಲಾಗಿತ್ತು. ಇದೀಗ ಮತ್ತೈದು ವರ್ಷಕ್ಕೆ ಈ ಯೋಜನೆ ವಿಸ್ತರಿಸುವುದಾಗಿ ಮೋದಿ ಘೋಷಣೆ ಮಾಡಲಾಗಿದೆ. ಶೀಘ್ರದಲ್ಲೇ ಈ ಕುರಿತು ಕೇಂದ್ರ ಸಂಪುಟ ಸಭೆಯಲ್ಲಿ ಅನುಮೋದನೆ ಸಿಗಲಿದೆ.





