ವಿಹಾರಕ್ಕೆಂದು ತೆರಳಿದ್ದ 24 ವಿದ್ಯಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ದೋಣಿ ವಡೋದರಾ ನಗರದ ಹೊರವಲಯದಲ್ಲಿರುವ ಕೆರೆಗೆ ಉರುಳಿ ಬಿದ್ದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಘಟನೆ ನಡೆದ ಹರ್ನಿ ಸರೋವರದಲ್ಲಿ ಉಳಿದ ವಿದ್ಯಾರ್ಥಿಗಳ ಪತ್ತೆಗೆ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಗುಜರಾತ್ ಶಿಕ್ಷಣ ಸಚಿವ ಕುಬೇರ್ ದಿಂಡೋರ್, “ಶಾಲಾ ವಿದ್ಯಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ದೋಣಿ ಸರೋವರಕ್ಕೆ ಪಲ್ಟಿಯಾದ ಪರಿಣಾಮ ಆರು ಮಕ್ಕಳು ಸಾವನ್ನಪ್ಪಿದ್ದಾರೆ, ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.
ದೋಣಿಯಲ್ಲಿ 27 ಮಕ್ಕಳಿದ್ದರು ಎಂದು ವಡೋದರಾ ಜಿಲ್ಲಾಧಿಕಾರಿ ಎಬಿ ಗೋರ್ ತಿಳಿಸಿದ್ದಾರೆ. “ನಾವು ಇತರರನ್ನು ಪತ್ತೆಹಚ್ಚಲು ಮತ್ತು ರಕ್ಷಿಸಲು ಪ್ರಯತ್ನಿಸುತ್ತಿದ್ದೇವೆ” ಎಂದು ಅವರು ಹೇಳಿದರು.
“ವಿಹಾರಕ್ಕೆಂದು ಇಲ್ಲಿಗೆ ಬಂದಿದ್ದ ಶಾಲಾ ವಿದ್ಯಾರ್ಥಿಗಳನ್ನು ಹೊತ್ತೊಯ್ಯುತ್ತಿದ್ದ ದೋಣಿ ಹರ್ನಿ ಸರೋವರದಲ್ಲಿ ಪಲ್ಟಿಯಾಗಿದೆ. ಅಗ್ನಿಶಾಮಕ ದಳವು ಇದುವರೆಗೆ ಏಳು ವಿದ್ಯಾರ್ಥಿಗಳನ್ನು ರಕ್ಷಿಸಿದೆ, ನಾಪತ್ತೆಯಾದವರಿಗಾಗಿ ಶೋಧ ನಡೆಯುತ್ತಿದೆ” ಎಂದು ವಡೋದರದ ಮುಖ್ಯ ಅಗ್ನಿಶಾಮಕ ಅಧಿಕಾರಿ ಪಾರ್ಥ್ ಬ್ರಹ್ಮಭಟ್ ತಿಳಿಸಿದ್ದಾರೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ತಲುಪುವ ಮೊದಲು ಸ್ಥಳೀಯರು ಕೆಲವು ಮಕ್ಕಳನ್ನು ರಕ್ಷಿಸಿದ್ದಾರೆ ಎಂದು ಅವರು ಹೇಳಿದರು.
ದೋಣಿಯಲ್ಲಿ ಖಾಸಗಿ ಶಾಲೆಯ 27 ವಿದ್ಯಾರ್ಥಿಗಳು ಇದ್ದರು, ಅವರಲ್ಲಿ ಯಾರೂ ಲೈಫ್ ಜಾಕೆಟ್ ಧರಿಸಿರಲಿಲ್ಲ ಎಂದು ವರದಿಯಾಗಿದೆ.09 ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ ಎಂದು ವರದಿಯಾಗಿದ್ದು, ಇತರರಿಗಾಗಿ ಶೋಧ ನಡೆಯುತ್ತಿದೆ.
ಉಡುಪಿ, ಮಂಗಳೂರಿನಲ್ಲಿ ಕೆಲಸ ಬೇಕೇ? ಸರ್ಕಾರಿ, ಅರೆಸರ್ಕಾರಿ, ಖಾಸಗಿ ಕಂಪೆನಿಗಳ ಉದ್ಯೋಗಾವಕಾಶಗಳ ಕುರಿತ ಸಂಪೂರ್ಣ ವಿವರಗಳಿಗೆ ಈ ಲಿಂಕ್ ಕ್ಲಿಕ್ ಮಾಡಿ