Share this news

ಬೆಂಗಳೂರು : ರಾಜ್ಯದಲ್ಲಿ ಮಹಿಳೆಯರಿಗೆ (ಮನೆ ಯಜಮಾನಿಗೆ) 2000 ರೂ. ಸಹಾಯಧನ ನೀಡುವ ಯೋಜನೆಯಾದ ಗೃಹಲಕ್ಷ್ಮಿ ಯೋಜನೆಯ ನೋಂದಣಿ ಪ್ರಕ್ರಿಯೆಯನ್ನು ಕಾಂಗ್ರೆಸ್‌ ಸರ್ಕಾರ ಸ್ಥಗಿತಗೊಳಿಸಿದೆ.

ಗೃಹಲಕ್ಷ್ಮಿ ಯೋಜನೆ ಬಗ್ಗೆ ಪ್ರಕಟಣೆ ಹೊರಡಿಸಿರುವ ಕರ್ನಾಟಕ ಸರಕಾರವು ಇದುವರೆಗೆ ನೋಂದಾಯಿತ ಫಲಾನುಭವಿಗಳ ಬ್ಯಾಂಕ್‌ ಖಾತೆಗೆ ರೂ.2000 ಹಣ ಜಮಾಗೊಳಿಸುವ ಪ್ರಕ್ರಿಯೆಯಲ್ಲಿ ಗೊಂದಲವಾಗದಿರಲೆಂದು ‘ಗೃಹ ಲಕ್ಷ್ಮಿ ಯೋಜನೆ’ಯ ಹೊಸ ನೋಂದಣಿ ತಾತ್ಕಾಲಿಕ ಸ್ಥಗಿತಗೊಂಡಿದೆ. ನೋಂದಣಿಯಾದ ಎಲ್ಲಾ ಫಲಾನುಭವಿಗಳಿಗೆ ಮೊದಲ ಕಂತಿನ ಹಣ ಜಮಾಗೊಂಡ ಬಳಿಕ ನೋಂದಣಿ ಪ್ರಕ್ರಿಯೆ ಪುನರಾರಂಭಗೊಳ್ಳಲಿದೆ. ಗೃಹಲಕ್ಷ್ಮಿ ಯೋಜನೆಯಡಿ ನೋಂದಾಯಿಸಲು ಶೀಘ್ರವೇ ಅವಕಾಶ ಮಾಡಿಕೊಡಲಾಗುವುದು. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ 1902 ಕ್ಕೆ ಕರೆಮಾಡಿ ಎಂದು ತಿಳಿಸಿದೆ.

ಆಗಸ್ಟ್ 30ರಂದು ಮೈಸೂರಿನಲ್ಲಿ ಅದ್ಧೂರಿ ಕಾರ್ಯಕ್ರಮ ಮಾಡಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಗೃಹಲಕ್ಷ್ಮೀ ಯೋಜನೆಗೆ ಚಾಲನೆ ನೀಡಲಾಗಿತ್ತು. ಆದರೆ ಯೋಜನೆ ಜಾರಿಯಾಗಿ ಒಂದೇ ವಾರಕ್ಕೆ ಗೃಹಲಕ್ಷ್ಮೀ ಯೋಜನೆ ನೋಂದಣಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಇನ್ನು ಶೀಘ್ರದಲ್ಲಿಯೇ ನೋಂದಣಿ ಪುನರಾರಂಭಗೊಳ್ಳಲಿದೆ ಎಂದು ತಿಳಿಸಿದೆ.

ಇದುವರೆಗೂ ನೋಂದಾಯಿತ ಫಲಾನುಭವಿಗಳ ಖಾತೆಗೆ ರೂ.2000 ಜಮಾಗೊಳಿಸುವ ಪ್ರಕ್ರಿಯೆ ನಡೆಯುತ್ತಿದ್ದು ಗೊಂದಲವಾಗದಿರಲೆಂದು, ಗೃಹಲಕ್ಷ್ಮೀ ಯೋಜನೆಯ ಹೊಸ ನೋಂದಣಿಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ. ಸದ್ಯ ಈ ಹಿಂದೆಯೇ ನೋಂದಣಿಯಾದ ಎಲ್ಲ ಫಲಾನುಭವಿಗಳಿಗೆ ಮೊದಲ ಕಂತಿನ ಹಣ ಜಮಾಗೊಂಡ ಬಳಿಕ ಮತ್ತೆ ಹೊಸ ನೋಂದಣಿ ಪ್ರಕ್ರಿಯೆ ಪುನರಾರಂಭವಾಗಲಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ತನ್ನ ಎಕ್ಸ್‌ ಖಾತೆಯಲ್ಲಿ ತಿಳಿಸಿದೆ.

Leave a Reply

Your email address will not be published. Required fields are marked *