Share this news

ಬೆಂಗಳೂರು ಡಿ.26: ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿರುವ ಗೃಹ ಲಕ್ಷ್ಮೀ ಕುರಿತಂತೆ ತಾಂತ್ರಿಕ ಸಮಸ್ಯೆಗಳನ್ನು ಸ್ಥಳದಲ್ಲೇ ನಿವಾರಿಸಲು ರಾಜ್ಯ ಸರ್ಕಾರ ಮುಂದಾಗಿದೆ.
ಈ ನಿಟ್ಟಿನಲ್ಲಿ ರಾಜ್ಯದ ಎಲ್ಲಾ ಗ್ರಾಮ ಪಂಚಾಯತಿ ಕಚೇರಿಗಳಲ್ಲಿ ಡಿ. 27ರಿಂದ 29ರವರೆಗೆ ಮೂರು ದಿನಗಳ ಕಾಲ ಗೃಹ ಲಕ್ಷ್ಮೀ ವಿಶೇಷ ಶಿಬಿರವನ್ನು ಆಯೋಜಿಸಲಾಗುತ್ತಿದೆ.

ಈ ಪ್ರಕ್ರಿಯೆಯಲ್ಲಿ ಸುಮಾರು 2.50 ಲಕ್ಷ ಫಲಾನುಭವಿಗಳ ಬ್ಯಾಂಕ್ ಖಾತೆಗಳಿಗೆ ಆಧಾರ್ ಜೋಡಣೆ ಮಾಡದೇ ಇರುವುದು ಮತ್ತು ಸುಮಾರು 70 ಸಾವಿರ ನಿಷ್ಕ್ರಿಯ ಬ್ಯಾಂಕ್ ಖಾತೆಗಳಿಗೆ ಆಧಾರ್ ಜೋಡಣೆ ಮಾಡಿರುವುದು ಕಂಡು ಬಂದಿರುತ್ತದೆ. ಈ ಫಲಾನುಭವಿಗಳು ಹೊಸ ಬ್ಯಾಂಕ್ ಖಾತೆ ತೆರೆಯಲು ಇಚ್ಛಿಸಿರುವುದು ಗಮನಕ್ಕೆ ಬಂದಿರುತ್ತದೆ. ಹಾಗೆಯೇ, ಬಹಳಷ್ಟು ಫಲಾನುಭವಿಗಳು ನೇರ ನಗದು ವರ್ಗಾವಣೆ ಪ್ರಕ್ರಿಯೆಯನ್ನು ಸುಗಮಗೊಳಿಸಲು ಬ್ಯಾಂಕ್ ಖಾತೆಗಳಿಗೆ ಆಧಾರ್ ಜೋಡಣೆ ಮಾಡುವುದು ಅಗತ್ಯವಿರುತ್ತದೆ. ಆದ್ದರಿಂದ ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದ ಎಲ್ಲಾ ತಾಂತ್ರಿಕ ಸಮಸ್ಯೆಗಳನ್ನು ಪರಿಹರಿಸಲು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕ್ಯಾಂಪ್‌ಗಳನ್ನು ಆಯೋಜಿಸಲು ಸಿಎಂ ಸೂಚಿಸಿದ್ದಾರೆ.
ಆಯಾ ಗ್ರಾಮ ಪಂಚಾಯಿತಿಯಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನೇತೃತ್ವದಲ್ಲಿ ಕ್ಯಾಂಪ್‌ಗಳನ್ನು ಆಯೋಜಿಸುವ ಜವಾಬ್ದಾರಿ ನೀಡಲಾಗಿದೆ.ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದ ಎಲ್ಲಾ ತಾಂತ್ರಿಕ ಮತ್ತು ಬ್ಯಾಂಕ್ ಸಂಬಂಧಿಸಿದ ಸಮಸ್ಯೆಗಳನ್ನು ಈ ಕ್ಯಾಂಪ್‌ಗಳಲ್ಲಿ ಪರಿಹರಿಸಲು ಸೂಚನೆ ನೀಡಲಾಗಿದೆ‌.ಈ ಕ್ಯಾಂಪ್ ಗಳಲ್ಲಿ ಸ್ಥಳೀಯ ಬಾಪೂಜಿ ಸೇವಾ ಕೇಂದ್ರದ ಗಣಕ ಯಂತ್ರ ನಿರ್ವಾಹಕರು, ಅಂಗನವಾಡಿ ಕಾರ್ಯಕರ್ತರು, ಇಂಡಿಯಾ ಪೋಸ್ಟ್ ಪೇಮೆಂಟ್ ಬ್ಯಾಂಕ್ ನ ಪ್ರತಿನಿಧಿಗಳು ಮತ್ತು ಇತರೆ ಬ್ಯಾಂಕ್‌ಗಳ ಪ್ರತಿನಿಧಿಗಳು ಈ ಕ್ಯಾಂಪ್‌ಗಳಲ್ಲಿ ಭಾಗವಹಿಸುತ್ತಾರೆ.
ಕ್ಯಾಂಪ್‌ಗಳಲ್ಲಿ ಫಲಾನುಭವಿಯ ಬ್ಯಾಂಕ್ ಖಾತೆಗಳಿಗೆ ಆಧಾರ್ ಜೋಡಣೆ ಮಾಡುವುದು,ಹೊಸ ಬ್ಯಾಂಕ್ ಖಾತೆಗಳನ್ನು ತೆರೆಯುವುದು ಮತ್ತು ಆಧಾರ್ ಜೋಡಣೆ ಮಾಡುವುದು,ಇ-ಕೆವೈಸಿ ಅಪ್‌ಡೇಟ್ ಮಾಡುವುದು,ಗೃಹಲಕ್ಷ್ಮೀ ಅರ್ಜಿಯ ಸ್ಥಿತಿ ಪರಿಶೀಲಿಸಲಾಗುತ್ತದೆ ಅಲ್ಲದೇ ಗೃಹಲಕ್ಷ್ಮೀ ಯೋಜನೆಗೆ ಸಂಬಂಧಿಸಿದ ಇತರೆ ಸಮಸ್ಯೆಗಳನ್ನು ಇತ್ಯರ್ಥಪಡಿಸಲಾಗುತ್ತದೆ.
ಬೆಳಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ಈ ಶಿಬಿರ ನಡೆಯಲಿದೆ.
ಗೃಹ ಲಕ್ಷ್ಮೀ ಯೋಜನೆಯಲ್ಲಿ ತಾಂತ್ರಿಕ ತೊಡಕುಗಳಿರುವ ಫಲಾನುಭವಿಗಳು ತಮ್ಮ ಸಮೀಪದ ಗ್ರಾಮ ಪಂಚಾಯತಿಗಳಿಗೆ ತೆರಳಿ ಈ ಶಿಬಿರದಲ್ಲಿ ಪರಿಹಾರ ಕಂಡುಕೊಳ್ಳಬಹುದಾಗಿದೆ.

ನೀವು ಈಗಾಗಲೇ ಶಿಕ್ಷಣ ಮುಗಿಸಿ ಉದ್ಯೋಗದ ಹುಡುಕಾಟದಲ್ಲಿ ಇದ್ದೀರಾ? ಉಡುಪಿ, ಮಂಗಳೂರಿನಲ್ಲಿ ಕೆಲಸ ಬೇಕೇ? ಸರ್ಕಾರಿ, ಅರೆಸರ್ಕಾರಿ, ಖಾಸಗಿ ಕಂಪೆನಿಗಳ ಉದ್ಯೋಗಾವಕಾಶಗಳ ಕುರಿತ ಸಂಪೂರ್ಣ ವಿವರಗಳಿಗೆ ಈ  ಲಿಂಕ್ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *