ಮೈಸೂರು : ಕೇಂದ್ರದಿಂದ ರಾಜ್ಯಕ್ಕೆ ಅನುದಾನ ನೀಡುವಲ್ಲಿ ತಾರತಮ್ಯ ತೋರಿದ್ದು, ಇಂದು ಕೇಂದ್ರ ಸಚಿವ ಅಮಿತ್ ಷಾ ರಾಜಕೀಯ ಆಗಮಿಸಿದ್ದು, ಈ ಹಿನೆಲೆಯಲ್ಲಿ ಮೈಸೂರಿನಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಗೋ ಬ್ಯಾಕ್ ಅಮಿತ್ ಶಾ ಎಂದು ಘೋಷಣೆ ಕೂಗುವ ಮೂಲಕ ಕಪ್ಪು ಪಟ್ಟಿ ಧರಿಸಿ ಪ್ರತಿಭಟನೆ ನಡೆಸಿದರು.
ಕೇಂದ್ರದಿಂದ ಅನುದಾನ ತಾರತಮ್ಯ ಮಾಡಿದ್ದಾರೆ ಎಂದು ಆರೋಪಿಸಿ ಮೈಸೂರು ಗ್ರಾಮಾಂತರ ಹಾಗೂ ನಗರ ಕಾಂಗ್ರೆಸ್ ವತಿಯಿಂದ ಮೈಸೂರಿನ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು. ಬರಿಗೈನಲ್ಲಿ ಬಂದ ಗೃಹ ಸಚಿವರಿಗೆ ಧಿಕ್ಕಾರ ಎಂದು ಕಿಡಿಕಾರಿರುವ ಕಾಂಗ್ರೆಸ್‌ನ ಕಾರ್ಯಕರ್ತರು ಕಪ್ಪು ಪಟ್ಟಿ ಧರಿಸಿ. ಗೋ ಬ್ಯಾಕ್ ಅಮಿಶ್ ಶಾ ಎಂದು ಘೋಷಣೆ ಕೂಗಿದರು.
ನನ್ನ ತೆರಿಗೆ ನನ್ನ ಹಕ್ಕು ಎಂದು ಘೋಷಣೆ ಕೂಗಿ ಆಕ್ರೋಶ ಹೊರಹಾಕಿದೆ. ಅಮಿಶ್ ಶಾ ವಿರುದ್ಧ ಪೋಸ್ಟರ್ ಅಭಿಯಾನವನ್ನು ಕೂಡ ಕಾಂಗ್ರೆಸ್ ಕಾರ್ಯಕರ್ತರು ಕೈಗೊಂಡಿದ್ದಾರೆ. ಗೋಡೆಗಳಿಗೆ ಪೋಸ್ಟರ್ ಅಂಟಿಸಲು ಮುಂದಾದರು. ಈ ವೇಳೆ ಪೋಸ್ಟರ್ ಅಂಟಿಸದಂತೆ ಪೊಲೀಸರು ತಾಕೀತು ಮಾಡಿದರು.
ಈ ಸಂದರ್ಭದಲ್ಲಿ ಪೊಲೀಸರು ಹಾಗೂ ಕಾಂಗ್ರೆಸ್ ಕಾರ್ಯಕರ್ತರ ನಡುವೆ ವಾಗ್ವಾದ ನಡೆಯಿತು. ಬಳಿಕ ಪೊಲೀಸರು ಪೋಸ್ಟರ್ ಕಿತ್ತುಕೊಂಡು ಹೋದ ಪ್ರಸಂಗವೂ ನಡೆಯಿತು. ಇದಾದ ನಂತರ ಕಾಂಗ್ರೆಸ್ ಕಾರ್ಯಕರ್ತರು ಪೊಲೀಸರ ಕೈಯಿಂದ ಪೋಸ್ಟರ್ ಕಿತ್ತುಕೊಂಡು ಗೋಡೆಗಳಿಗೆ ಅಂಟಿಸಿದರು.
ಉಡುಪಿ, ಮಂಗಳೂರಿನಲ್ಲಿ ಕೆಲಸ ಬೇಕೇ? ಸರ್ಕಾರಿ, ಅರೆಸರ್ಕಾರಿ, ಖಾಸಗಿ ಕಂಪೆನಿಗಳ ಉದ್ಯೋಗಾವಕಾಶಗಳ ಕುರಿತ ಸಂಪೂರ್ಣ ವಿವರಗಳಿಗೆ ಈ ಲಿಂಕ್ ಕ್ಲಿಕ್ ಮಾಡಿ