ಬೆಂಗಳೂರು :ಕರ್ನಾಟಕದಲ್ಲಿ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಾಗಿರುವ ಹಿಂದೂಗಳ ಪರವಾಗಿ ಕಾನೂನು ಹೋರಾಟ ನಡೆಸುತ್ತಿದ್ದ ನ್ಯಾಯವಾದಿ ಕೃಷ್ಣಮೂರ್ತಿಯವರ ಮೇಲೆ ಅಪರಿಚಿತರಿಂದ ಗುಂಡಿನ ದಾಳಿ ನಡೆಸಲಾಗಿದ್ದು, ಈ ದಾಳಿಯ ಹಿಂದಿರುವ ಮಾಸ್ಟರ್ ಮೈಂಡ್ ನ ಅನ್ನು ಪೊಲೀಸರು ಶೀಘ್ರದಲ್ಲಿ ಪತ್ತೆ ಮಾಡಬೇಕೆಂದು ಹಿಂದೂ ಜನಜಾಗೃತಿ ಸಮಿತಿಯ ರಾಜ್ಯ ವಕ್ತಾರ ಮೋಹನ್ ಗೌಡ ಆಗ್ರಹಿಸಿದ್ದಾರೆ.

ನ್ಯಾಯವಾದಿ ಕೃಷ್ಣಮೂರ್ತಿ ಅವರು ವಿಶ್ವ ಹಿಂದೂ ಪರಿಷತ್ತಿನ ಸಭೆ ಮುಗಿಸಿ ತಮ್ಮ ಕಾರಿನಲ್ಲಿ ಚೆಟ್ಟಳ್ಳಿಯಿಂದ ಮಡಿಕೇರಿಗೆ ಹೊರಡುತ್ತಿದ್ದರು. ಈ ವೇಳೆ ಅವರ ಮೇಲೆ ಗುಂಡಿನ ದಾಳಿ ನಡೆದಿದೆ. ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿನ ಹಿಂದೂ ಆರೋಪಿಗಳ ನ್ಯಾಯವಾದಿಗಳ ಮೇಲೆ ಆಕ್ರಮಣವಾಗುವುದು ಅತ್ಯಂತ ಗಂಭೀರ ಮತ್ತು ಅನುಮಾನಾಸ್ಪದವಾಗಿದೆ. ಗೌರಿ ಲಂಕೇಶ್ ಅವರು ನಕ್ಸಲೀಯರ ಸಂಪರ್ಕದಲ್ಲಿದ್ದರು ಎಂದು ಸ್ವತಃ ಅವರೇ ಹೇಳಿಕೊಂಡಿದ್ದರು. ಆಕೆಯ ಹತ್ಯೆಯ ನಂತರ ನಕ್ಸಲೀಯರೂ ಪ್ರತಿಭಟನೆ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ಈ ಪ್ರಕರಣದಲ್ಲಿ ವಕೀಲರ ಮೇಲೆ ಒತ್ತಡ ಹೇರಲು ಈ ದಾಳಿ ನಡೆದಿದೆಯೇ ಎಂಬ ಶಂಕೆ ವ್ಯಕ್ತವಾಗಿದೆ ಎಂದಿದ್ದಾರೆ.

ಗುAಡಿನ ದಾಳಿಯಲ್ಲಿ ನ್ಯಾಯವಾದಿ ಕೃಷ್ಣಮೂರ್ತಿ ಇವರು ಬದುಕುಳಿದಿದ್ದರೂ ಅವರ ಮೇಲೆ ಮತ್ತೊಮ್ಮೆ ದಾಳಿ ನಡೆಯುವ ಸಾಧ್ಯತೆಯಿದೆ. ಆದ್ದರಿಂದ ಅವರಿಗೆ ಪೊಲೀಸ್ ರಕ್ಷಣೆಯ ಅಗತ್ಯವಿದೆ. ಈ ದಾಳಿಯ ಹಿಂದೆ ‘ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ’ ದಂತಹ ಕಟ್ಟರ್ ವಾದಿ ಜಿಹಾದಿ ಸಂಘಟನೆ ಅಥವಾ ಗೌರಿ ಲಂಕೇಶ್ ಅವರನ್ನು ಬೆಂಬಲಿಸುವ ಅರ್ಬನ್ ನಕ್ಸಲಿಸ್ಟ್ ಗಳು ಇದ್ದಾರೆಯೇ ಎನ್ನುವುದನ್ನು ತನಿಖೆಯಲ್ಲಿ ಬಯಲಿಗೆಳೆಯಬೇಕೆಂದು ಮೋಹನ ಗೌಡ ಆಗ್ರಹಿಸಿದ್ದಾರೆ.

