ಬೆಂಗಳೂರು: ಸ್ಥಳೀಯ ಪ್ರಾಧಿಕಾರವಾದ ಗ್ರಾಮ ಪಂಚಾಯಿತಿಯ ತಾತ್ಕಾಲಿಕ ನೆಲೆಯಲ್ಲಿ ಕರ್ತವ್ಯ ನಿರ್ವಹಿಸುವ ನೌಕರರನ್ನು ಸಿ ಮತ್ತು ಡಿ ದರ್ಜೆ ನೌಕರರೆಂದು ಪರಿಗಣಿಸಲು ಸಾಧ್ಯವಿಲ್ಲ ಅದೇ ರೀತಿ ಸರಕಾರಿ ನೌಕರರಂತೆ ವೇತನ ಶ್ರೇಣಿ ನಿಗದಿಪಡಿಸಲು ಸಾಧ್ಯವಿಲ್ಲವೆಂದು ಕೋಟ ಶ್ರೀನಿವಾಸ ಪೂಜಾರಿ ವಿಧಾನ ಪರಿಷತ್ ನಲ್ಲಿ ಮಾಹಿತಿ ನೀಡಿದರು
ಗ್ರಾಮ ಸ್ವರಾಜ್ಯ ಮತ್ತು ಪಂಚಾಯತ್ ರಾಜ್ ನಿಯಮದಂತೆ ಗ್ರಾಮ ಪಂಚಾಯತಿ ಸಿಬ್ಬಂದಿ ವರ್ಗದ ಮಾದರಿ ನೇಮಕಾತಿ ವಿಧಾನ ಮತ್ತು ವೇತನ ಶ್ರೇಣಿ ನಿಗದಿ ಪಡಿಸಿದ್ದು ಅದರಂತೆ ಮಂಜೂರಾದ ಹುದ್ದೆಗಳಿಗೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಅನುಮೋದನೆ ಪಡೆದು ಸ್ಥಳೀಯ ಪ್ರಾಧಿಕಾರದ ಪಂಚಾಯತ್ ಖಾಯಂ ನೌಕರರಾಗಿರುತ್ತಾರೆ ಎಂದು ತಿಳಿಸಿದರು