ಬೆಳ್ತಂಗಡಿ: ಕೊಟ್ಟಿಗೆಹಾರದಿಂದ ಚಾರ್ಮಾಡಿ ಘಾಟ್ ಮಾರ್ಗವಾಗಿ ಉಜಿರೆಗೆ ಬರುತ್ತಿದ್ದ ಕಾರೊಂದು ಭಾನುವಾರ ರಾತ್ರಿ ಘಾಟಿಯ ಎರಡನೇ ತಿರುವಿನ ಬಳಿ ಚಾಲಕನ ನಿಯಂತ್ರಣ ತಪ್ಪಿ, ಸುಮಾರು ೧೦೦ ಮೀಟರ್ ಆಳದ ಕಂದಕಕ್ಕೆ ಉರುಳಿ ಬಿದ್ದು ಕಾರಿನಲ್ಲಿದ್ದ ಐವರ ಪೈಕಿ ಓರ್ವ ಮಹಿಳೆ ಮೃತಪಟ್ಟಿದ್ದು, ಉಳಿದ ನಾಲ್ಕು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಪುಷ್ಪಾವತಿ ಆರ್. ಶೆಟ್ಟಿ ಹಾಗೂ ಕುಟುಂಬಸ್ಥರು ಕೊಪ್ಪದಲ್ಲಿ ನಿಧನರಾದ ಸಂಬAಧಿಕರ ಮನೆಗೆ ಭೇಟಿ ನೀಡಿ ಹಿಂದಿರುಗುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಸರೋಜಿನಿ ಎಂಬವರು ಮೃತಪಟ್ಟಿದ್ದು. ಪುಷ್ಪಾವತಿ, ಅವರ ಪುತ್ರಿ ಪೂರ್ಣಿಮಾ ಶೆಟ್ಟಿ, ಮೊಮ್ಮಗ ಸಮೃದ್ ಹಾಗೂ ಸಾಕ್ಷಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳು ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಪ್ರಪಾತಕ್ಕೆ ಬಿದ್ದವರನ್ನು ಸ್ಥಳೀಯರ ಸಹಕಾರದಿಂದ ಮೇಲೆತ್ತಲಾಗಿದ್ದು, ಬೆಳ್ತಂಗಡಿ ಸಂಚಾರಿ ಠಾಣೆಯ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.