ಚಿತ್ರದುರ್ಗ: ಶೋಷಿತ ವರ್ಗ ಸಮಾಜದ ಎಲ್ಲಾ ರಂಗಗಳಲ್ಲಿ ಮುಂದೆ ಬರಬೇಕು ಈ ನಿಟ್ಟಿನಲ್ಲಿ ಜಾತಿ ಜಾತಿಗಣತಿ ವರದಿಯನ್ನು ಸ್ವೀಕಾರ ಮಾಡಿಯೇ ಸಿದ್ಧ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಅವರು ಚಿತ್ರದುರ್ಗದ ಮಾದಾರ ಚನ್ನಯ್ಯ ಮಠದ ಬಳಿಯ ಮೈದಾನದಲ್ಲಿ ನಡೆದ ಶೋಷಿತರ ಜಾಗೃತಿ ಸಮಾವೇಶದಲ್ಲಿ ಮಾತನಾಡಿ,ನಾನು ಮುಖ್ಯಮಂತ್ರಿಯಾಗಿದ್ದಾಗ ಕಾಂತರಾಜು ಸಮಿತಿ ರಚನೆ ಮಾಡಿದ್ದು,ಬಳಿಕ 2018ರಲ್ಲಿ ನಾನು ಸಿಎಂ ಸ್ಥಾನದಿಂದ ಇಳಿಯುವಾಗ ವರದಿ ಪೂರ್ಣ ಆಗಿರಲಿಲ್ಲ.ನಂತರ ಬಂದ ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದಲ್ಲಿ ಮಾಜಿ ಸಿಎಂಗಳಾದ ಹೆಚ್ಡಿ. ಕುಮಾರಸ್ವಾಮಿ ಮತ್ತು ನಂತರ ಬಂದ ಬಿಜೆಪಿ ಸರ್ಕಾರದಲ್ಲಿ ಬಸವರಾಜ ಬೊಮ್ಮಾಯಿ ಅವರು ವರದಿ ಪಡೆಯಲಿಲ್ಲ. ಈಗ ಹಿಂದುಳಿದ ವರ್ಗಗಳ ಆಯೋಗ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆಯವರಲ್ಲಿ ವರದಿ ಕೊಡಿ ಅಂತ ನಾನು ಹೇಳಿದ್ದೇನೆ. ಲೋಪದೋಷ ಇದ್ದರೆ ತಜ್ಞರ ಸಲಹೆ ಪಡೆಯುತ್ತೇವೆ ಎಂದು ಹೇಳಿದರು. ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದ ರಾಜ್ಯಗಳಲ್ಲಿ ಜಾತಿ ಗಣತಿ ವರದಿಯನ್ನು ತರುತ್ತೇವೆ ಎಂದು ನಾವು ಹೇಳಿದ್ದೇವೆ. ನೀವು ಕೊಟ್ಟ ಎಲ್ಲಾ ಬೇಡಿಕೆಗಳಿಗೆ ಸಹಮತ ಇದೆ. ಸಚಿವ ಸಂಪುಟದಲ್ಲಿ ಇಟ್ಟು ತೀರ್ಮಾನ ಮಾಡುತ್ತೇವೆ. ನಾನು ಯಾವಾಗಲೂ ನಿಮ್ಮ ಪರ ಇರುತ್ತೇನೆ. ರಾಷ್ಟ್ರಪತಿ ದ್ರೌಪದಿ ಮುರ್ಮ ಅವರನ್ನು ಸಂಸತ್ತು ಭವನ ಉದ್ಘಾಟನೆಗೆ ಕರೆಯಲಿಲ್ಲ. ರಾಮಂದಿರ ಉದ್ಘಾಟನೆಗೂ ಕರೆಯಲಿಲ್ಲ ಎಂದು ಬಿಜೆಪಿ ವಿರುದ್ಧ ಇದೇ ಸಂದರ್ಭದಲ್ಲಿ ಸಿಎಂ ವಾಗ್ದಾಳಿ ನಡೆಸಿದರು.
ಸಮಾಜದಲ್ಲಿ ಅಸಮಾನತೆ, ನಿರಂತರ ಶೋಷಣೆ: ಕೆಲವು ಶಕ್ತಿಗಳು ನನ್ನನ್ನು ವಿರೋಧಿಸುತ್ತಿವೆ. ಇದೊಂದು ಐತಿಹಾಸಿಕ ಸಮಾವೇಶ. ಸಮಾಜದಲ್ಲಿ ಹಿಂದಿನಿಂದಲೂ ಶೋಷಣೆ ನಡೆಯುತ್ತಲೇ ಇದೆ, ಇದಕ್ಕೆ ಜಾತಿ ವ್ಯವಸ್ಥೆಯೇ ಕಾರಣ. ಈ ಜಾತಿ ವ್ಯವಸ್ಥೆಯಿಂದ ನಿರಂತರವಾಗಿ ಶೋಷಣೆ ನಡೆದಿದೆ. ಸಂವಿಧಾನದಿಂದಾಗಿ ಶೋಷಣೆ ಕಡಿಮೆಯಾಗಿದೆ. ಮೀಸಲಾತಿಯನ್ನು ಆರ್ಎಸ್ಎಸ್, ಬಿಜೆಪಿ ವಿರೋಧ ಮಾಡುತ್ತಿದೆ. ಕೆಲವು ಶಕ್ತಿಗಳು ನನ್ನನ್ನು ವಿರೋಧ ಮಾಡುತ್ತಿವೆ ಎಂದು ಕಿಡಿಕಾರಿದ್ದಾರೆ.
ಕುರಿ ಕಾಯುವವನ ಮಗ ಸಿಎಂ ಆದ ಎಂದು ವಿರೋಧ ಮಾಡುತ್ತಾರೆ. 14 ಬಜೆಟ್ ಮಂಡಿಸಿದವನು ನಾನು. ಅನ್ನಭಾಗ್ಯ, ಶೂಭಾಗ್ಯ, ಪಶು ಭಾಗ್ಯ ಕೊಟ್ಟಿದ್ದು ತಪ್ಪೇ? ಇವತ್ತು ಐದು ಗ್ಯಾರಂಟಿ ಯೋಜನೆಗಳನ್ನು ಕೊಟ್ಟಿದ್ದು ತಪ್ಪೇ? ಇದಕ್ಕೆ ಕೆಲವರು ನನ್ನನ್ನು ವಿರೋಧ ಮಾಡುತ್ತಿದ್ದಾರೆ ಎಂದು ಆರೋಪಿಸಿದರು
ಉಡುಪಿ, ಮಂಗಳೂರಿನಲ್ಲಿ ಕೆಲಸ ಬೇಕೇ? ಸರ್ಕಾರಿ, ಅರೆಸರ್ಕಾರಿ, ಖಾಸಗಿ ಕಂಪೆನಿಗಳ ಉದ್ಯೋಗಾವಕಾಶಗಳ ಕುರಿತ ಸಂಪೂರ್ಣ ವಿವರಗಳಿಗೆ ಈ ಲಿಂಕ್ ಕ್ಲಿಕ್ ಮಾಡಿ