ನವದೆಹಲಿ(ಮಾ.29): ಕರ್ನಾಟಕ ವಿಧಾನಸಭಾ ಚುನಾವಣೆ ಘೋಷಣೆಯಾಗಿದೆ. ಮೇ.10 ರಂದ ಒಂದು ಹಂತದಲ್ಲಿ ಚುನಾವಣೆ ನಡೆಯಲಿದೆ. ಇನ್ನು ಮೇ.13 ರಂದು ಫಲಿತಾಂಶ ಘೋಷಣೆಯಾಗಲಿದೆ. ಚುನಾವಣಾ ಆಯೋಗ ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಚುನಾವಣಾ ದಿನಾಂಕ ಪ್ರಕಟಿಸಿದೆ. ಇದರ ಬೆನ್ನಲ್ಲೇ ಕರ್ನಾಟಕದಲ್ಲಿ ಚುನಾವಣಾ ಚಟುವಟಿಕೆ ಗರಿಗೆದರಿದೆ.
ಇತ್ತ ಕರ್ನಾಟಕ ವಿಧಾನಸಭಾ ಚುನಾವಣಾ ದಿನಾಂಕ ಘೋಷಣೆ ಬೆನ್ನಲ್ಲೇ ಆಯೋಗ, 4 ರಾಜ್ಯಗಳ ಉಪ ಚುನಾವಣೆ ದಿನಾಂಕವನ್ನು ಘೋಷಿಸಲಾಗಿದೆ. ಉತ್ತರ ಪ್ರದೇಶ, ಒಡಿಶಾ, ಪಂಜಾಬ್ ಹಾಗೂ ಮೆಘಾಲಯದ ಉಪ ಚುನಾವಣೆ ದಿನಾಂಕವೂ ಘೋಷಣೆಯಾಗಿದೆ. ಈ ಉಪ ಚುನಾವಣೆ ಕೂಡ ಮೇ. 10 ರಂದು ನಡೆಯಲಿದೆ. ಮೇ.13ಕ್ಕೆ ಫಲಿತಾಂಶ ಹೊರಬೀಳಲಿದೆ.
ಜಲಂಧರ್ ಲೋಕಸಭಾ ಸ್ಥಾನ, ಪಂಜಾಬ್‌ನ ಜಾರ್ಸುಗುಡಾ-7 ವಿಧಾನಸಭಾ ಸ್ಥಾನ, ಒಡಿಶಾದ 395- ಛಾನ್ಬೇ, ಉತ್ತರ ಪ್ರದೇಶದ ಸೌರ್ 34 ಹಾಗೂ ಮೆಘಾಲಯದ ಶಿಲ್ಲಾಂಗ್ 23 ವಿಧಾನಸಭಾ ಸ್ಥಾನಗಳಿಗೆ ಉಪ ಚುನಾವಣೆ ನಡೆಯಲಿದೆ. ಕರ್ನಾಟಕದ ವಿಧಾನಸಭಾ ಚುನಾವಣೆ ದಿನದಂದೇ ಈ ಉಪಚುನಾವಣೆ ನಡಯಲಿದೆ ಎಂದು ಚುನಾವಣಾ ಆಯೋಗ ಮುಖ್ಯಸ್ಥ ರಾಜೀವ್ ಕುಮಾರ್ ಹೇಳಿದ್ದಾರೆ.