Share this news

ಉಡುಪಿ: ಜಿಲ್ಲೆಯಲ್ಲಿ ಕುಂದಾಪುರ ವಾಜಪೇಯಿ ಎಂದೇ ಪ್ರಖ್ಯಾತವಾಗಿದ್ದ ಬಿಜೆಪಿ ಶಾಸಕ ಹಾಲಾಡಿ ಶ್ರೀನಿವಾಸ ಶೆಟ್ಟಿ ಅವರು, ಇಂದು ರಾಜಕೀಯ ನಿವೃತ್ತಿ ಘೋಷಣೆ ಮಾಡಿದ್ದು ಚುನಾವಣಾ ರಾಜಕೀಯಕ್ಕೆ ಗುಡ್‌ಬೈ ಹೇಳಿದ್ದಾರೆ.

ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಬಾರಿಯ ಚುನಾವಣೆಯಲ್ಲಿ ಸ್ಪರ್ಧಿಸದಿರಲು ನಿರ್ಧರಿಸಿದ್ದೇನೆ. ನಾಲ್ಕು ಬಾರಿ ಕುಂದಾಪರದಿAದ ಬಿಜೆಪಿ ಟಿಕೆಟ್ ನೀಡಿದ್ದಾರೆ. ಅದಕ್ಕಾಗಿ ಧನ್ಯವಾದ ಅರ್ಪಿಸುತ್ತೇನೆ. ಬಿಜೆಪಿ ನಾಯಕರು, ಕಾರ್ಯಕರ್ತರಿಗೆ ಚಿರಋಣಿಯಾಗಿದ್ದೇನೆ. ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದು, ರಾಜಕೀಯ ನಿವೃತ್ತಿಯನ್ನು ಹೊಂದಲಿದ್ದೇನೆ ಎಂದು ಹೇಳಿದ್ದಾರೆ.

ಹಾಲಾಡಿ ಶ್ರೀನಿವಾಸ ಶೆಟ್ಟಿಯವರು ಕುಂದಾಪುರದಲ್ಲಿ ಐದು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದವರು. ಬಿಜೆಪಿಯಲ್ಲಿ ಯುವಕರಿಗೆ ಅವಕಾಶ ಕಲ್ಪಿಸಬೇಕೆನ್ನುವ ನಿಟ್ಟಿನಲ್ಲಿ ಕಿರಣ್ ಕೊಡ್ಗಿ ಅವರಿಗೆ ಟಿಕೆಟ್ ಸಿಗಬೇಕೆಂದು ಬೆಂಬಲಿಸಿ ರಾಜಕೀಯ ನಿವೃತ್ತಿಯನ್ನು ಘೋಷಿಸಿದ್ದಾರೆ ಎನ್ನಲಾಗಿದೆ. ಬಿಜೆಪಿಯಿಂದ ವಿಧಾನಸಭಾ ಚುನಾವಣೆಗೆ ಟಿಕೆಟ್ ಘೋಷಣೆಯಾಗಿಲ್ಲ. ಮೇ.10ರಂದು ನಡೆಯುವ ಮತದಾನಕ್ಕೆ ಶೀಘ್ರವೇ ಬಿಜೆಪಿಯಿಂದ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸುವ ಸಾಧ್ಯತೆ ಇದೆ. ಕುಂದಾಪುರದಿAದ ಬಿಜೆಪಿ ಅಭ್ಯರ್ಥಿಯಾಗಿ ಕಿರಣ್ ಕೊಡ್ಗಿ ಅವರಿಗೆ ಟಿಕೆಟ್ ಘೋಷಣೆ ಮಾಡುವ ಸಾಧ್ಯತೆ ಇದೆ.

Leave a Reply

Your email address will not be published. Required fields are marked *