ನವದೆಹಲಿ/ಬೆಂಗಳೂರು: ಮುಂಬರುವ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದು ಶಿವಮೊಗ್ಗದ ಬಿಜೆಪಿ ಶಾಸಕ ಕೆಎಸ್ ಈಶ್ವರಪ್ಪ ಪಕ್ಷದ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ಪತ್ರ ಬರೆದಿದ್ದಾರೆ .
ಕರ್ನಾಟಕದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸದಿರಲು ಭಾರತೀಯ ಜನತಾ ಪಕ್ಷದ (ಬಿಜೆಪಿ) ಹಿರಿಯ ನಾಯಕ ಕೆಎಸ್ ಈಶ್ವರಪ್ಪ ನಿರ್ಧರಿಸಿದ್ದಾರೆ. ಶಿವಮೊಗ್ಗದ ಬಿಜೆಪಿ ಶಾಸಕರು ತಮ್ಮ ನಿರ್ಧಾರವನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರಿಗೆ ಪತ್ರದ ಮೂಲಕ ತಿಳಿಸಿದ್ದಾರೆ.
ಚುನಾವಣಾ ಸ್ಪರ್ಧೆಯಿಂದ ಹೊರಗುಳಿಯುವ ಅವರ ನಿರ್ಧಾರದ ಹಿಂದಿನ ಕಾರಣಗಳು ಇನ್ನೂ ಸ್ಪಷ್ಟವಾಗಿಲ್ಲ. ವಯಸ್ಸಾಗಿರುವ ಕಾರಣಕ್ಕೆ ಈ ಬಾರಿ ಈಶ್ವರಪ್ಪನವರಿಗೆ ಟಿಕೆಟ್ ನೀಡಲಾಗುವುದಿಲ್ಲ ಎನ್ನಲಾಗುತಿತ್ತು. ಶಿವಮೊಗ್ಗದಿಂದ ತಮ್ಮ ಪುತ್ರ ಕಾಂತೇಶ್‌ಗೆ ಈಶ್ವರಪ್ಪ ಕೇಳಿದ್ದು, ಮತ್ತೊಂಡು ಕಡೆ ಅಯನೂರ ಮಂಜುನಾಥ್ ಕೂಡ ಬಿಜೆಪಿಯಿಂದ ಟಿಕೇಟ್ ಕೇಳಿದ್ದು, ಶಿವಮೊಗ್ಗ ನಗರ ವಿಧಾನಸಭಾ ಚುನಾವಣೆ ಈ ಬಾರಿ ಎಲ್ಲರ ಗಮನ ಸೆಳೆದಿದೆ.