ಬೆಂಗಳೂರು, ಮಾರ್ಚ್ 22: ವಿಧಾನಸಭೆ ಚುನಾವಣೆಯ ಸಂದರ್ಭದಲ್ಲೇ ಬಿಜೆಪಿಗೆ ಸಚಿವ ಭೈರತಿ ಬಸವರಾಜ ಬಿಗ್ ಶಾಕ್ ನೀಡಲಿದ್ದಾರೆ ಎನ್ನುವ ಮಾಹಿತಿ ಹಬ್ಬಿದೆ.
ಬಿಜೆಪಿ ಎಂಎಲ್ ಸಿ ಬಾಬುರಾವ್ ಚಿಂಚನಸೂರ ಬಿಜೆಪಿ ತೊರೆದ ಬೆನ್ನಲ್ಲೇ ಸಚಿವ ಭೈರತಿ ಬಸವರಾಜ್ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎನ್ನಲಾಗಿದ್ದು,ಈ ಸುದ್ದಿ ಬಿಜೆಪಿ ವಲಯದಲ್ಲಿ ಭಾರೀ ಸಂಚಲನ ಮೂಡಿಸಿದೆ
ರಾಜ್ಯ ವಿಧಾನ ಸಭೆ ಚುನಾವಣೆಗೆ ನೀತಿ ಸಂಹಿತೆ ಘೋಷಣೆಯಾದ ನಂತರ ಕೆ ಆರ್ ಪುರಂ ಬಿಜೆಪಿ ಶಾಸಕ, ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ಕಾಂಗ್ರೆಸ್ ಸೇರಲಿದ್ದಾರೆ ಎಂದು ಹೇಳಲಾಗುತ್ತಿದೆ.
ಇತ್ತೀಚೆಗಷ್ಟೇ ಇಬ್ಬರು ಬಿಜೆಪಿ ಎಂಎಲ್‌ಸಿಗಳು ಪಕ್ಷ ತೊರೆದು ಕಾಂಗ್ರೆಸ್‌ಗೆ ಸೇರ್ಪಡೆಗೊಂಡಿದ್ದಾರೆ. ಬಿಜೆಪಿಯಿಂದ ನಾಲ್ಕು ಬಾರಿ ಎಂಎಲ್‌ಸಿ ಆಗಿದ್ದ ಪುಟ್ಟಣ್ಣ ಅವರು ಕಳೆದ ವಾರ ಕಾಂಗ್ರೆಸ್‌ಗೆ ಸೇರಿದ್ದಾರೆ. ಬಿಜೆಪಿ ತೊರೆದ ಬಾಬುರಾವ್ ಚಿಂಚನಸೂರು ಕಾಂಗ್ರೆಸ್ ಸೇರ್ಪಡೆ ಖಚಿತ ಎನ್ನಲಾಗಿದೆ.
ಒಟ್ಟಿನಲ್ಲಿ ಸಾಲುಸಾಲು ಬಿಜೆಪಿ ಮುಖಂಡರು ಪಕ್ಷ ತೊರೆಯುತ್ತಿರುವ ಹಿನ್ನಲೆಯಲ್ಲಿ ರಾಜ್ಯ ಬಿಜೆಪಿ ನಾಯಕರು ಕಂಗಾಲಾಗಿದ್ದಾರೆ.