Share this news

ಬೆಂಗಳೂರು: ಎಂಎಲ್​ಎ ಟಿಕೆಟ್​ ಕೊಡಿಸುವುದಾಗಿ ವಂಚಿಸಿದ ಹಿಂದೂ ಸಂಘಟನೆ ಕಾರ್ಯಕರ್ತೆ ಚೈತ್ರಾ ಕುಂದಾಪುರ ಪಕ್ರರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ ಗೆ ನೋಟಿಸ್ ನೀಡಲು ಸಿಸಿಬಿಯಿಂದ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.

ಇತ್ತೀಚೆಗೆ ಚೈತ್ರಾ ಕುಂದಾಪುರ ವಂಚನೆ ಕೇಸ್​ ಬಗ್ಗೆ ಸುದ್ದಿಗೋಷ್ಠಿ ಮಾಡಿದ್ದ ಎಂ.ಲಕ್ಷ್ಮಣ, ವಂಚನೆ ಕೇಸ್​ನಲ್ಲಿ ಈವರೆಗೆ ಇಲ್ಲದ ಹೆಚ್ಚಿನ ವಿಚಾರ, ಬೇರೆ ಬೇರೆ ವ್ಯಕ್ತಿಗಳ ಹೆಸರು ಪ್ರಸ್ತಾಪಿಸಿದ್ದರು. ಹಾಗಾಗಿ ಪ್ರಕರಣದ ಬಗ್ಗೆ ಮಾಹಿತಿ ನೀಡುವಂತೆ ನೋಟಿಸ್ ನೀಡಲು ತನಿಖಾಧಿಕಾರಿಗಳು ಸಿದ್ಧತೆ ನಡೆಸಿದ್ದಾರೆ.

ಚೈತ್ರಾ ಕುಂದಾಪುರಗೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಚಿವ ಆರಗ ಜ್ಞಾನೇಂದ್ರ ಅವರ ಜೊತೆ ನೇರ ಸಂಪರ್ಕವಿದೆ. ಮಾಜಿ ಸಚಿವ ಸಿ.ಟಿ ರವಿ, ಮಾಜಿ ಸಿಎಂ ಬಿಎಸ್​ ಯಡಿಯೂರಪ್ಪ, ಚಿಂತಕ ಚಕ್ರವರ್ತಿ ಸೂಲಿಬೆಲೆ ಜೊತೆ ಈಕೆಯ ಸಂಬಂಧ ಏನು ಅನ್ನೋದನ್ನು ಸ್ಪಷ್ಟಪಡಿಸಬೇಕು ಎಂದು ಒತ್ತಾಯಿಸಿದ್ದರು.ಪಿಎಸ್‌ಐ ಹಗರಣಕ್ಕೂ ಚೈತ್ರಾಗೂ ಸಂಬಂಧವಿದೆಯಾ ಎಂಬುವುದರ ಬಗ್ಗೆ ತನಿಖೆಯಾಗಬೇಕು. ಚೈತ್ರಾ ಕುಂದಾಪುರ ಪಿಎಸ್‌ಐ ಸೇರಿದಂತೆ ನಾಲ್ಕಕ್ಕೂ ಹೆಚ್ಚು ಹಗರಣದಲ್ಲಿ ಭಾಗಿಯಾಗಿರುವ ಬಗ್ಗೆ ಮಾಹಿತಿ ಇದೆ. ಆಕೆಗೆ ಜೈಲಿನಲ್ಲಿರುವ ಕೆಲವರ ಸಂಪರ್ಕ ಇದೆ. ಈ ಬಗ್ಗೆ ನಮ್ಮ ಸರ್ಕಾರ ಪ್ರಾಮಾಣಿಕ ತನಿಖೆ ಮಾಡಿಸುತ್ತದೆ ಎಂದು ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ ಹೇಳಿದ್ದರು.

 

Leave a Reply

Your email address will not be published. Required fields are marked *