Share this news

ಜಮ್ಮುಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯಲ್ಲಿ ಭಯೋತ್ಪಾದಕರೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಸೇನಾ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.

ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಕಾರ್ಡನ್ ಮತ್ತು ಶೋಧ ಕಾರ್ಯಾಚರಣೆಯ ನಂತರ ಸೋಮವಾರ ಸಂಜೆ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವೆ ಎನ್‌ಕೌಂಟರ್ ನಡೆಯಿತು. ಅನುಮಾನಾಸ್ಪದ ಚಲನವಲನದ ಬಗ್ಗೆ ಖಚಿತ ಮಾಹಿತಿಯ ಮೇರೆಗೆ ಸೇನೆ ಮತ್ತು ಜಮ್ಮು ಮತ್ತು ಕಾಶ್ಮೀರ ಪೊಲೀಸರ ಜಂಟಿ ತಂಡ ಸೋಮವಾರ ಕಲಕೋಟೆ ಪ್ರದೇಶದಲ್ಲಿ ಬ್ರೋಹ್ ಮತ್ತು ಸೂಮ್ ಅರಣ್ಯ ವಲಯವನ್ನು ಸುತ್ತುವರೆದಿತ್ತು.ಉಗ್ರರು ತಪ್ಪಿಸಿಕೊಳ್ಳುವ ಪ್ರಯತ್ನದಲ್ಲಿ ಸೈನಿಕರ ಮೇಲೆ ಗುಂಡು ಹಾರಿಸಿದ್ದಾರೆ, ಇದರ ಪ್ರತೀಕಾರವಾಗಿ ಗುಂಡಿನ ದಾಳಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಗುಂಡಿನ ದಾಳಿಯಲ್ಲಿ ಇಬ್ಬರು ಸೇನಾ ಸಿಬ್ಬಂದಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಸ್ತುತ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.ಸೈನಿಕರು ಆ ಪ್ರದೇಶದಲ್ಲಿ ಇಬ್ಬರು ಭಯೋತ್ಪಾದಕರು ಇದ್ದಾರೆ ಎಂಬುದನ್ನು ತಿಳಿದುಕೊಂಡು ಅವರು ತಪ್ಪಿಸಿಕೊಳ್ಳಬಹುದಾದ ಎಲ್ಲಾ ಸಂಭಾವ್ಯ ಮಾರ್ಗಗಳನ್ನು ಮುಚ್ಚಲು ಪ್ರಯತ್ನಿಸಿದ್ದರು.

 

 

 

 

Leave a Reply

Your email address will not be published. Required fields are marked *