Share this news

ನವದೆಹಲಿ : ಕಂಬಳ ಹಾಗೂ ಜಲ್ಲಿಕಟ್ಟು ಸ್ಪರ್ಧೆಗೆ ಅವಕಾಶ ನೀಡುವ ಕಾನೂನನ್ನು ಸುಪ್ರೀಂಕೋರ್ಟ್​ ಎತ್ತಿಹಿಡಿದಿದೆ. ತಮಿಳುನಾಡು, ಕರ್ನಾಟಕ ಮತ್ತು ಮಹಾರಾಷ್ಟ್ರದಂತಹ ರಾಜ್ಯಗಳಲ್ಲಿ ಜಲ್ಲಿಕಟ್ಟು, ಕಂಬಳ ಮತ್ತು ಎತ್ತಿನಗಾಡಿ ಓಟಕ್ಕೆ ಅನುಮತಿ ನೀಡುವ ಕಾನೂನುಗಳ ಸಾಂವಿಧಾನಿಕತೆಯನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ಸುಪ್ರೀಂಕೋರ್ಟ್​ನ ಸಂವಿಧಾನಪೀಠ ವಜಾಗೊಳಿಸಿದೆ. ತಮ್ಮ ನಿರ್ಧಾರವು ಮಹಾರಾಷ್ಟ್ರ ಮತ್ತು ಕರ್ನಾಟಕದಲ್ಲಿ ಕಂಬಳ ಹಾಗೂ ಗೂಳಿ ಓಟದ ಮೇಲಿನ ಕಾನೂನುಗಳಿಗೆ ಅನ್ವಯಿಸುತ್ತದೆ ಹಾಗೂ ಈ ಕಾನೂನನ್ನು ಕಟ್ಟುನಿಟ್ಟಾಗಿ ಅನುಸರಿಸಬೇಕು ಎಂದು ಪೀಠವು ಹೇಳಿದೆ.

ಜಲ್ಲಿಕಟ್ಟು ತಮಿಳುನಾಡಿನ ಸಾಂಸ್ಕೃತಿಕ ಪರಂಪರೆಯ ಭಾಗವೆಂದು ಶಾಸಕಾಂಗವು ಘೋಷಿಸಿದಾಗ, ನ್ಯಾಯಾಂಗವು ವಿಭಿನ್ನ ದೃಷ್ಟಿಕೋನವನ್ನು ತೆಗೆದುಕೊಳ್ಳಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್ ಸಂವಿಧಾನ ಪೀಠ ಹೇಳಿದೆ. ತಮಿಳುನಾಡಿನಲ್ಲಿ ಪೊಂಗಲ್ ಸುಗ್ಗಿಯ ಹಬ್ಬದಲ್ಲಿ ಸಾಂಪ್ರದಾಯಿಕವಾಗಿ ಆಡಲಾಗುತ್ತದೆ, ಜಲ್ಲಿಕಟ್ಟು ಒಂದು ಗೂಳಿಯನ್ನು ಪಳಗಿಸುವ ಕ್ರೀಡೆಯಾಗಿದೆ.

ನ್ಯಾ. ಕೆಎಂ ಜೋಸೆಫ್, ನ್ಯಾ. ಅಜಯ್ ರಸ್ತೋಗಿ, ನ್ಯಾ. ಅನಿರುದ್ಧ ಬೋಸ್, ನ್ಯಾ. ಹೃಷಿಕೇಶ್ ರಾಯ್ ಮತ್ತು ನ್ಯಾ. ಸಿಟಿ ರವಿಕುಮಾರ್ ಅವರನ್ನೊಳಗೊಂಡ ಐವರು ನ್ಯಾಯಮೂರ್ತಿಗಳ ಸಂವಿಧಾನ ಪೀಠ ತೀರ್ಪು ಪ್ರಕಟಿಸಿದೆ.

Leave a Reply

Your email address will not be published. Required fields are marked *