Share this news

ಬೆಂಗಳೂರು: ಜಿಲ್ಲಾ ಉಸ್ತುವಾರಿ ಸಚಿವರ ನೇಮಕದ ಬೆನ್ನಲ್ಲೇ, ರಾಜ್ಯ ಸರ್ಕಾರದಿಂದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನು ನೇಮಕ ಮಾಡಿ ಇಂದು ಆದೇಶ ಹೊರಡಿಸಿದೆ.

 

ಈ ಸಂಬAಧ ಅಧಿಸೂಚನೆ ಹೊರಡಿಸಿರುವ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಎಸ್ ಕಲ್ಪನ ಅವರು, ರಾಜ್ಯದ ಅಭಿವೃದ್ಧಿ ಯೋಜನಾ ಕಾರ್ಯಕ್ರಮಗಳ ಜಾರಿ ಮತ್ತು ಪರಿಶೀಲನೆ ಹಾಗೂ ಅಹವಾಲುಗಳ ವಿಚಾರಣೆ, ಅನಿರೀಕ್ಷಿತ ತಪಾಸಣೆ ಕುರಿತು ಪರಿಶೀಲನೆ ಮಾಡಿ ಸರ್ಕಾರ ವರದಿ ಮಾಡಲು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳ ಮಟ್ಟದ ಅಧಿಕಾರಿಗಳನ್ನು ದಿನಾಂಕ 11-04-2023ರಲ್ಲಿ ವಿವಿಧ ಜಿಲ್ಲೆಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನಾಗಿ ನೇಮಕ ಮಾಡಲಾಗಿತ್ತು.ಜಿಲ್ಲಾವಾರು ಅಧಿಕಾರಿಗಳನ್ನು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳನ್ನಾಗಿ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವೆರೆಗೆ ನೇಮಕ ಮಾಡಿ ಆದೇಶಿಸಿದ್ದಾರೆ.

ಈ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆ ನಡೆಸುವುದು.ಸರ್ಕಾರದ ನೂತನವಾಗಿ ಘೋಷಣೆ ಮಾಡುವ ಯೋಜನೆಗಳ ಅನುಷ್ಠಾನದ ಪರಿಶೀಲನೆ ನಡೆಸುವುದು. ಎಸ್ಸಿ, ಎಸ್ಟಿ, ಹಿಂದುಳಿದ ವರ್ಗಗಳ ಹಾಗೂ ಅಲ್ಪ ಸಂಖ್ಯಾತರ ವಿದ್ಯಾರ್ಥಿ ನಿಲಯಗಳಿಗೆ ಅನಿರೀಕ್ಷಿತ ಭೇಟಿ ನೀಡಿ, ಸುವ್ಯವಸ್ಥೆಗೊಳಿಸುವುದು. ಬಾಡಿಗೆ ವಿದ್ಯಾರ್ಥಿನಿಲಯಗಳ ಕಟ್ಟಡ ನಿರ್ಮಾಣಕ್ಕಾಗಿ ಅಗತ್ಯತೆಗನುಗುಣವಾಗಿ ನಿವೇಶನಗಳನ್ನು ಒದಗಿಸಲು ಕ್ರಮವಹಿಸುವಂತೆ ತಿಳಿಸಿದ್ದಾರೆ.

ಆರೋಗ್ಯ ಸೇವೆಗಳ ಗುಣಮಟ್ಟವನ್ನು ಪರಿಶೀಲಿಸಲು ಆಗಾಗ ಜಿಲ್ಲಾಸ್ಪತ್ರೆ ಹಾಗೂ ತಾಲೂಕು ಆಸ್ಪತ್ರೆಗಳಿಗೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲಿಸುವುದು. ವೈದ್ಯರ ಅಥವಾ ಇತರೆ ನೌಕರರ ಕೊರತೆ ಇದ್ದಲ್ಲಿ ಅದನ್ನು ಸರಿಪಡಿಸುವ ಕುರಿತು ಕ್ರಮಕೈಗೊಳ್ಳುವುದು ಎಂದಿದ್ದಾರೆ.

ಹೀಗಿದೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಪಟ್ಟಿ:

 

Leave a Reply

Your email address will not be published. Required fields are marked *