Share this news

ಬೆಂಗಳೂರು : ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ ರಾಜ್ಯದ ಜಿಲ್ಲಾ ಪಂಚಾಯಿತಿ, ತಾಲೂಕು ಪಂಚಾಯತ್ ಕ್ಷೇತ್ರಗಳ ಸದಸ್ಯರ ಸಂಖ್ಯೆ ಹಾಗೂ ಕ್ಷೇತ್ರಗಳ ಗಡಿಯನ್ನು ನಿಗದಿಗೊಳಿಸಿದ್ದು, ಕರಡು ಅಧಿಸೂಚನೆ ಪ್ರಕಟಿಸಿದೆ.

ಕರ್ನಾಟಕ ಪಂಚಾಯತ್ ರಾಜ್ ಸೀಮಾ ಆಯೋಗವು ರಾಜ್ಯದ 31 ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಕ್ಷೇತ್ರಗಳ ಸದಸ್ಯರ ಸಂಖ್ಯೆ ಮತ್ತು ಕ್ಷೇತ್ರಗಳು ಒಳಗೊಂಡಿರುವ ಗ್ರಾಮಗಳ ವಿವರ, ಗಡಿ ಇತ್ಯಾದಿಗಳೊಂದಿಗೆ ಕರಡು ಗೆಜೆಟ್ ಪ್ರಕಟಿಸಲಾಗಿದೆ.

ಸದಸ್ಯರ ಸಂಖ್ಯೆ ಹಾಗೂ ಚುನಾವಣೆ ಕ್ಷೇತ್ರಗಳ ವ್ಯಾಪ್ತಿಗೆ ಸಂಬಂಧಿಸಿದಂತೆ ಆಕ್ಷೇಪಣೆಗಳು ಇದ್ದಲ್ಲಿ ಜನವರಿ 16 ರ ಸಂಜೆ 5 ಗಂಟೆಯೊಳಗೆ ಸಲ್ಲಿಸಬಹುದು. ಆಕ್ಷೇಪಣೆಗಳನ್ನು ಆನ್ ಲೈನ್ ಮೂಲಕ ಅಥವಾ ಖುದ್ದಾಗಿ  ಅಂಚೆಯ ಮೂಲಕ ಸಲ್ಲಿಸಬಹುದು. ನಿಗದಿತ ದಿನಾಂಕದ ನಂತರ ಸಲ್ಲಿಕೆಯಾದ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ. https//rdpr.karnataka.gov.in/rdc/public/ ನಲ್ಲಿ ಮುಖಪುಟದ ಎಡ ಭಾಗದಲ್ಲಿರುವ ಸಾರ್ವಜನಿಕರ ಸಲಹೆಗಳು ಎಂಬ ಶೀರ್ಷಿಕೆ ಕ್ಲಿಕ್ ಮಾಡಿ ಆಕ್ಷೇಪಣೆ ಸಲ್ಲಿಸಬಹುದಾಗಿದೆ. ಇಲ್ಲವೇ ಕರ್ನಾಟಕ ಪಂಚಾಯತ್ ರಾಜ್ ಸೀಮಾ ನಿರ್ಣಯ ಆಯೋಗ, ಮೂರನೇ ಗೇಟ್, ಎರಡನೇ ಮಹಡಿ, ಕೊಠಡಿ ಸಂಖ್ಯೆ 222/ಎ ಬಹುಮಹಡಿ ಕಟ್ಟಡ, ಅಂಬೇಡ್ಕರ್ ವೀದಿ, ಬೆಂಗಳೂರು -1 ಈ ವಿಳಾಸಕ್ಕೆ ಆಕ್ಷೇಪಣೆ ಸಲ್ಲಿಸಬಹುದು.

Leave a Reply

Your email address will not be published. Required fields are marked *