ಮೂಡಬಿದಿರೆ: ಮೂಡಬಿದಿರೆ ಎಕ್ಸಲೆಂಟ್ ಶಿಕ್ಷಣ ಸಮೂಹ ಸಂಸ್ಥೆಯ ರಾಜ ಸಭಾಂಗಣದ ಉದ್ಘಾಟನಾ ಸಮಾರಂಭ ಹಾಗೂ 2022- 23ನೇ ಶೈಕ್ಷಣಿಕ ಸಾಲಿನ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವು ಜುಲೈ .15 ಶನಿವಾರ ಮಧ್ಯಾಹ್ನ 12.15 ರಿಂದ ನಡೆಯಲಿದೆ.
ಮುಖ್ಯ ಅತಿಥಿಗಳಾಗಿ ಮೈಸೂರು ಅರಮನೆ ಮಹಾಸಂಸ್ಥಾನದ ಮಹಾರಾಜರಾದ ಶ್ರೀ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರು ಭಾಗವಹಿಸಲಿದ್ದಾರೆ ಎಂದು ಎಕ್ಸಲೆಂಟ್ ಶಿಕ್ಷಣ ಸಮೂಹ ಸಂಸ್ಥೆಗಳ ಅಧ್ಯಕ್ಷರಾದ ಯುವರಾಜ ಜೈನ್ ಹಾಗೂ ಕಾರ್ಯದರ್ಶಿಗಳಾದ ರಶ್ಮಿತಾ ಜೈನ್ ತಿಳಿಸಿದ್ದಾರೆ.