ಬೆಂಗಳೂರು: ಜೂನ್ 28 ರಂದು ರಾಜ್ಯ ಸರ್ಕಾರದಿಂದ ಮಹತ್ವದ ಸಚಿವ ಸಂಪುಟ ಸಭೆಯನ್ನು ಸಿಎಂ ಸಿದ್ದರಾಮಯ್ಯ ಅವರು ಕರೆದಿದ್ದು, ಈ ಸಭೆಯಲ್ಲಿ ಮಹತ್ವದ ಚರ್ಚೆ ನಡೆಸಲಾಗುತ್ತದೆ ಎನ್ನಲಾಗಿದೆ.
ಅಂದು ಬೆಳಗ್ಗೆ ಬೆಳಗ್ಗೆ 11 ಗಂಟೆಗೆ ವಿಧಾನಸೌಧದ ಕೊಠಡಿಯಲ್ಲಿ ಸಿದ್ದರಾಮಯ್ಯ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಲಿದ್ದು, ಸಭೆಯಲ್ಲಿ ಐದು ಗ್ಯಾರಂಟಿಗಳ ಬಗ್ಗೆ ಚರ್ಚೆ ನಡೆಸಲಾಗುವುದು ಎನ್ನಲಾಗಿದೆ.
ಸರ್ಕಾರ ಈಗಾಗಲೇ ಎರಡು ಗ್ಯಾರಂಟಿಗಳನ್ನು ರಾಜ್ಯ ಸರ್ಕಾರ ಘೋಷಣೆ ಮಾಡಿದ್ದು, ಈ ನಡುವೆ ಗೃಹ ಜ್ಯೋತಿಗೆ ಸರ್ವರ್ ಸಮಸ್ಯೆ ಇದೇ. ಇದಲ್ಲದೇ ಅನ್ನ ಭಾಗ್ಯ ಯೋಜನೆ ಅಡಿಯಲ್ಲಿ ನೀಡಬೇಕಾಗಿರುವ ಐದು ಕೆಜಿ ಅಕ್ಕಿ ಕೂಡ ಇಲ್ಲಿ ತನಕ ರಾಜ್ಯ ಸರ್ಕಾರ ಜಾರಿಗೆ ತರಲು ಆಗುತ್ತಿಲ್ಲ. ಕೇಂಧ್ರ ಸರ್ಕಾರದ ಅಸಹಕಾರದ ಹಿನ್ನಲೆಯಲ್ಲಿ ನಾವು ಈ ಯೋಜನೆಯನ್ನು ಜಾರಿಗೆ ತರಲು ಸಾಧ್ಯವಾಗುತ್ತಿಲ್ಲವೆಂದು ರಾಜ್ಯ ಕಾಂಗ್ರೆಸ್ ನಾಯಕರು ಕಿಡಿಕಾರುತ್ತಿದ್ದಾರೆ.