Share this news

ವಾರಣಾಸಿ: ಜ್ಞಾನವಾಪಿ ಮಸೀದಿ ನೆಲಮಾಳಿಗೆಯಲ್ಲಿ ಪೂಜೆಗೆ ಯಾವುದೇ ನಿರ್ಬಂಧವಿಲ್ಲ. ಎಂದಿನಂತೆ ಪೂಜೆ ಮುಂದುವರೆಯಲಿ ಎಂದು ಹೈಕೋರ್ಟ್ ಆದೇಶ ನೀಡಿದೆ. ಈ ಮೂಲಕ ಮುಸ್ಲಿಂ ಕಡೆಯವರಿಗೆ ಮತ್ತೆ ಹಿನ್ನೆಡೆಯಾಗಿದೆ.

ಜ್ಞಾನವಾಪಿ ಮಸೀದಿ ಸಂಕೀರ್ಣದ ನೆಲಮಾಳಿಗೆಯೊಳಗೆ ಹಿಂದೂ ಭಕ್ತರಿಗೆ ಪೂಜೆ ಸಲ್ಲಿಸಲು ಅವಕಾಶ ನೀಡಿದ ವಾರಣಾಸಿ ನ್ಯಾಯಾಲಯದ ಆದೇಶದ ವಿರುದ್ಧ ಅರ್ಜಿ ಸಲ್ಲಿಸಿದ್ದ ಅಂಜುಮನ್ ಇಂಟೆಜಾಮಿಯಾ ಮಸೀದಿ ಸಮಿತಿಗೆ ಪರಿಹಾರ ನೀಡಲು ಅಲಹಾಬಾದ್ ಹೈಕೋರ್ಟ್ ನಿರಾಕರಿಸಿದೆ.

ಇದಕ್ಕೂ ಮುನ್ನ ನ್ಯಾಯಮೂರ್ತಿ ರೋಹಿತ್ ರಂಜನ್ ಅಗರ್ವಾಲ್ ಅವರ ಏಕಸದಸ್ಯ ಪೀಠವು ಜ್ಞಾನವಾಪಿ ಮಸೀದಿ ಆವರಣದ ಒಳಗೆ ಮತ್ತು ಹೊರಗೆ ಕಾನೂನು ಸುವ್ಯವಸ್ಥೆ ಕಾಪಾಡುವಂತೆ ಅಡ್ವೊಕೇಟ್ ಜನರಲ್ಗೆ ಆದೇಶಿಸಿತ್ತು. ಇನ್ನು ಪ್ರಕರಣದ ಮುಂದಿನ ವಿಚಾರಣೆ ಫೆಬ್ರವರಿ 6ಕ್ಕೆ ಮುಂದೂಡಿತ್ತು. ಸಧ್ಯ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಪೂಜೆಗೆ ಯಾವುದೇ ನಿರ್ಬಂಧವಿಲ್ಲ ಎಂದಿದೆ.

Leave a Reply

Your email address will not be published. Required fields are marked *