ಉತ್ತರ ಪ್ರದೇಶ: ಜ್ಞಾನವಾಪಿ ಮಸೀದಿ ವಿವಾದದ ಪ್ರಕರಣದಲ್ಲಿ ಹಿಂದೂಗಳಿಗೆ ಬಹುದೊಡ್ಡ ಗೆಲುವು ಸಿಕ್ಕಿದೆ. ಅದೇ ಜ್ಞಾನವಾಪಿ ಮಸೀದಿಯಲ್ಲಿ ಇರುವ ಶಿವಲಿಂಗಕ್ಕೆ ಪೂಜೆ ಸಲ್ಲಿಸಲು ಕೋರ್ಟ್ ಅನುಮತಿ ನೀಡಿದೆ.
ಉತ್ತರ ಪ್ರದೇಶದ ವಾರಣಾಸಿಯ ಜಿಲ್ಲಾ ನ್ಯಾಯಾಲಯವು ಈ ಕುರಿತು ತೀರ್ಪು ನೀಡಿದ್ದು, ಮಸೀದಿಯಲ್ಲಿ ಪೂಜೆ ಸಲ್ಲಿಸಲು ಹಿಂದೂಗಳಿಗೂ ಅವಕಾಶ ನೀಡಿದೆ. ಈ ಹಿಂದೆ ಜ್ಞಾನವಾಪಿ ಮಸೀದಿಯಲ್ಲಿನ ಭಾರತೀಯ ಪುರಾತತ್ವ ಇಲಾಖೆಯ ವರದಿಯನ್ನು ಹಿಂದೂ-ಮುಸ್ಲಿಂ ಮುಖಂಡರಿಗೆ ನೀಡುವಂತೆ ಸೂಚನೆ ನೀಡಿತ್ತು. ಅಲ್ಲದೇ ಅವರು ವೈಜ್ಞಾನಿಕ ಸಮೀಕ್ಷೆಯ ವರದಿಯನ್ನು ಪಡೆದಿದ್ದರು.
ಈ ಬೆನ್ನಲ್ಲೇ ವಾರಣಾಸಿಯ ಜಿಲ್ಲಾ ನ್ಯಾಯಾಲಯವು ಜ್ಞಾನವಾಪಿ ಮಸೀದಿಯಲ್ಲಿ ಹಿಂದೂಗಳು ಅಲ್ಲಿರುವ ಶಿವಲಿಂಗಕ್ಕೆ ಪೂಜೆ ಮಾಡೋದಕ್ಕೆ ಅವಕಾಶ ನೀಡಿದೆ. ಈ ಮೂಲಕ ಜ್ಞಾನವಾಪಿ ಮಸೀದಿ ಪ್ರಕರಣದಲ್ಲಿ ಹಿಂದೂಗಳಿಗೆ ದೊಡ್ಡ ಗೆಲುವು ಸಿಕ್ಕಂತಾಗಿದೆ.
ಜ್ಞಾನವಾಪಿಯ ಮುಚ್ಚಿದ 10 ಸೆಲಾರ್ ಗಳಲ್ಲಿ ಪೂಜೆ ಸಲ್ಲಿಸುವುದಕ್ಕೆ ಜಿಲ್ಲಾ ನ್ಯಾಯಾಲಯ ಸೂಚಿಸಿದೆ. ಇದಕ್ಕಾಗಿ 7 ದಿನಗಳಲ್ಲಿ ವ್ಯವಸ್ಥೆ ಮಾಡುವಂತೆ ತಿಳಿಸಲಾಗಿದೆ. ಬೇಸ್ಮೆಟ್ ನಲ್ಲಿ ಹಿಂದೂಗಳು ಪೂಜೆ ಸಲ್ಲಿಸಲು ಕೋರ್ಟ್ ಅನುಮತಿಸಿದೆ.
ಉಡುಪಿ, ಮಂಗಳೂರಿನಲ್ಲಿ ಕೆಲಸ ಬೇಕೇ? ಸರ್ಕಾರಿ, ಅರೆಸರ್ಕಾರಿ, ಖಾಸಗಿ ಕಂಪೆನಿಗಳ ಉದ್ಯೋಗಾವಕಾಶಗಳ ಕುರಿತ ಸಂಪೂರ್ಣ ವಿವರಗಳಿಗೆ ಈ ಲಿಂಕ್ ಕ್ಲಿಕ್ ಮಾಡಿ
ಉಡುಪಿ, ಮಂಗಳೂರಿನಲ್ಲಿ ಕೆಲಸ ಬೇಕೇ? ಸರ್ಕಾರಿ, ಅರೆಸರ್ಕಾರಿ, ಖಾಸಗಿ ಕಂಪೆನಿಗಳ ಉದ್ಯೋಗಾವಕಾಶಗಳ ಕುರಿತ ಸಂಪೂರ್ಣ ವಿವರಗಳಿಗೆ ಈ ಲಿಂಕ್ ಕ್ಲಿಕ್ ಮಾಡಿ