ಬೆಂಗಳೂರು: ಕೇಂದ್ರ ಸರ್ಕಾರ ಜಾರಿಗೊಳಿಸಿದ ಹಿಟ್ ಅಂಡ್ ರನ್ ಕಾಯ್ದೆಯ ವಿರುದ್ಧ ಉತ್ತರ ಭಾರತದಲ್ಲಿ ಲಾರಿ ಮಾಲೀಕರು ತೀವ್ರ ಪ್ರತಿಭಟನೆ ನಡೆಸಿದ ಬೆನ್ನಲ್ಲೇ ಕರ್ನಾಟಕದಲ್ಲೂ ಲಾರಿ ಮಾಲೀಕರು ಜ.17ರಿಂದ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಿದ್ದಾರೆ.
ಈ ಕುರಿತು ಇಂದು ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಲಾರಿ ಅಸೋಸಿಯೇಷನ್ ಗೌರವಾಧ್ಯಕ್ಷ ಚನ್ನಾರೆಡ್ಡಿ ಅವರು, ಕೇಂದ್ರ ಸರ್ಕಾರದಿಂದ ಹಿಟ್ ಅಂಡ್ ರನ್ ಕಾಯ್ದೆಯನ್ನು ಪರಿಷ್ಕರಣೆ ಮಾಡಲಾಗುತ್ತಿದೆ. ಲಾರಿ ಮಾಲೀಕರನ್ನು ಜೈಲಿಗಟ್ಟೋ ಕೆಲಸ ಮಾಡುತ್ತಿದೆ ಎಂಬುದಾಗಿ ಕಿಡಿಕಾರಿದರು. ಹಿಟ್ ಅಂಡ್ ರನ್ ಕೇಸ್ ಗೆ ಜೈಲು ಶಿಕ್ಷೆಯ ಅವಧಿಯನ್ನು ಹೆಚ್ಚಳ ಮಾಡಲಾಗುತ್ತಿದೆ. ದಂಡದ ಮೊತ್ತವನ್ನು ಭಾರೀ ಹೆಚ್ಚಳ ಮಾಡಲಾಗುತ್ತಿದೆ. ಇಂತಹ ಕಾಯ್ದೆಯನ್ನು ವಿರೋಧಿಸಿ ಕರ್ನಾಟಕದಲ್ಲಿ ಲಾರಿ ಮಾಲೀಕರಿಂದ ಜನವರಿ.17ರಿಂದ ಅನಿರ್ಧಿಷ್ಟಾವಧಿ ಮುಷ್ಕರವನ್ನು ನಡೆಸುವುದಾಗಿ ತಿಳಿಸಿದರು.
ಕಳೆದ ವಾರ ಉತ್ತರ ಭಾರತದ ಹಲವೆಡೆ ಲಾರಿ ಮಾಲೀಕರು ಕೇಂದ್ರ ಸರ್ಕಾರದ ಕಾಯ್ದೆಯ ವಿರುದ್ಧ ಸಿಡಿದೆದ್ದಿದ್ದರು. ಹೆದ್ದಾರಿಯಲ್ಲಿ ರಸ್ತೆ ತಡೆ ನಡೆಸಿ, ಟೈಯರ್ ಗಳಿಗೆ ಬೆಂಕಿ ಹಚ್ಚಿ ಪ್ರತಿಭಟನೆ ನಡೆಸಿದ್ದರು. ಈ ಬೆನ್ನಲ್ಲೇ ಕರ್ನಾಟಕದಲ್ಲೂ ಮುಷ್ಕರಕ್ಕೆ ಕರೆ ನೀಡಲಾಗಿದೆ.
ಲಾರಿ ಮಾಲೀಕರ ಮುಷ್ಕರದಿಂದ ಅಗತ್ಯವಸ್ತುಗಳ ಬೆಲೆ ಏರಿಕೆಯಾಗುವ ಸಾಧ್ಯತೆಯಿದ್ದು, ಈ ಮುಷ್ಕರದಿಂದ ಜನತೆಗೆ ಬೆಲೆಯೇರಿಕೆ ಬಿಸಿತಟ್ಟುವ ಸಾಧ್ಯತೆಯಿದೆ.
ನೀವು ಈಗಾಗಲೇ ಶಿಕ್ಷಣ ಮುಗಿಸಿ ಉದ್ಯೋಗದ ಹುಡುಕಾಟದಲ್ಲಿ ಇದ್ದೀರಾ? ಉಡುಪಿ, ಮಂಗಳೂರಿನಲ್ಲಿ ಕೆಲಸ ಬೇಕೇ? ಸರ್ಕಾರಿ, ಅರೆಸರ್ಕಾರಿ, ಖಾಸಗಿ ಕಂಪೆನಿಗಳ ಉದ್ಯೋಗಾವಕಾಶಗಳ ಕುರಿತ ಸಂಪೂರ್ಣ ವಿವರಗಳಿಗೆ ಈ ಲಿಂಕ್ ಕ್ಲಿಕ್ ಮಾಡಿ