Share this news

ಕಾರ್ಕಳ: ಕರಾವಳಿಯ ಉಭಯ ಜಿಲ್ಲೆಗಳ ಜಾನಪದ ಕ್ರೀಡೆಯಾಗಿರುವ ಕಂಬಳಕ್ಕೆ ಜಗತ್ತಿನೆಲ್ಲೆಡೆ ಇಂದು ಲಕ್ಷಾಂತರ ಅಭಿಮಾನಿಗಳಿದ್ದಾರೆ. ಕಂಬಳವು ಕೇವಲ ಕ್ರೀಡೆಯಲ್ಲ ಅದೊಂದು ಉತ್ಸವವಾಗಬೇಕು, ಕಂಬಳ ಕ್ರೀಡೆಯು ಇಂದು ಕೇವಲ ಕರಾವಳಿಗೆ ಮಾತ್ರ ಸೀಮಿತವಾಗಿಲ್ಲ, ಬದಲಾಗಿ ಬೆಂಗಳೂರಿಗೂ ವ್ಯಾಪಿಸಿದ್ದು, ಬೆಂಗಳೂರಿನ ಅರಮನೆ ಮೈದಾನದಲ್ಲಿ ಐತಿಹಾಸಿಕ ಕಂಬಳ ಕ್ರೀಡೆ ನಡೆಯುವ ಮೂಲಕ ಇಡೀ ರಾಜ್ಯದ ಜನರನ್ನು ಕಂಬಳ ಕ್ರೀಡೆ ಆಕರ್ಷಿತರಾಗಿದ್ದು, ಮುಂದಿನ ದಿನಗಳಲ್ಲಿ ಕರಾವಳಿಯ ಕಂಬಳ ಕ್ರೀಡೆ ರಾಜ್ಯವ್ಯಾಪಿಯಾಗಿ ನಡೆಯಬೇಕೆಂದು ಶಾಸಕ ಸುನಿಲ್ ಕುಮಾರ್ ಹೇಳಿದರು.
ಅವರು ಕಾರ್ಕಳ ಪ್ರವಾಸಿ ಬಂಗಲೆಯಲ್ಲಿ ಈ ಕುರಿತು ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಜನವರಿ 6ರಂದು ಮಿಯ್ಯಾರು ಲವ-ಕುಶ ಜೋಡುಕರೆ ಕಂಬಳವು ನಡೆಯಲಿದ್ದು, ಈ ಕಂಬಳವು ಉಡುಪಿ ದಕ್ಷಿಣ ಕನ್ನಡ ಜಿಲ್ಲೆಗಳ ಉಳಿದ ಎಲ್ಲಾ ಕಂಬಳಗಳಿಗಿAತ ವಿಭಿನ್ನವಾಗಿದೆ. ಸರ್ಕಾರದ ಅನುದಾನವನ್ನು ಬಳಸಿಕೊಂಡು ಸಾರ್ವಜನಿಕರಿಗೆ ವೀಕ್ಷಣಾ ಗ್ಯಾಲರಿ, ಕೋಣಗಳ ಮಾಲೀಕರಿಗೆ ಬೇಕಾದ ಛಾವಡಿ ವ್ಯವಸ್ಥೆ ಕಲ್ಪಿಸಲಾಗಿದ್ದು, ಮಿಯ್ಯಾರು ಕಂಬಳಕ್ಕೆ ದಾಖಲೆಯ ಸಂಖ್ಯೆಯಲ್ಲಿ ಕೋಣಗಳು ಭಾಗವಹಿಸುವ ಹಿನ್ನಲೆಯಲ್ಲಿ ಇದಕ್ಕೆ ಬೇಕಾದ ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗಿದೆ ಎಂದು ಅವರು ಮಾಹಿತಿ ನೀಡಿದರು.
ಕಂಬಳ ಕ್ರೀಡೆಯ ಸಭಾ ಕಾರ್ಯಕ್ರಮದಲ್ಲಿ ಉಸ್ತುವಾರಿ ಸಚಿವೆ ಲಕ್ಚಿö್ಮÃ ಹೆಬ್ಬಾಳ್ಕರ್, ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ, ವಿಪಕ್ಷ ನಾಯಕರಾದ ಆರ್.ಅಶೋಕ್, ಕೋಟ ಶ್ರೀನಿವಾಸ ಪೂಜಾರಿ ಮುಂತಾದವರು ಭಾಗವಹಿಸಲಿದ್ದಾರೆ ಎಂದರು. ಸರಕಾರಿ ನಿಯಮಾವಳಿಯ ಪ್ರಕಾಋ 24 ಗಂಟೆಯೊಳಗೆ ಕಂಬಳವನ್ನು ಮುಕ್ತಾಯಗೊಳಿಸಬೇಕು ಆದರೆ ಕೋಣಗಳ ಸಂಖ್ಯೆ ಪ್ರತೀವರ್ಷ ಹೆಚ್ಚಳವಾಗುತ್ತಿರುವ ಹಿನ್ನಲೆಯಲ್ಲಿ ನಿಗದಿತ ಮಿತಿಯೊಳಗೆ ಮುಗಿಸಲು ಪ್ರಯತ್ನಿಸಲಾಗುವುದು ಎಂದು ಸುನಿಲ್ ಕುಮಾರ್ ಹೇಳಿದರು
ಸುದ್ದಿಗೋಷ್ಠಿಯಲ್ಲಿ ಕಂಬಳ ತೀರ್ಪುಗಾರ ಗುಣಪಾಲ ಕಡಂಬ, ರವೀಂದ್ರ ಮಡಿವಾಳ,ಉದಯ ಕೋಟ್ಯಾನ್ ಮುಂತಾದವರು ಉಪಸ್ಥಿತರಿದ್ದರು

ನೀವು ಈಗಾಗಲೇ ಶಿಕ್ಷಣ ಮುಗಿಸಿ ಉದ್ಯೋಗದ ಹುಡುಕಾಟದಲ್ಲಿ ಇದ್ದೀರಾ? ಉಡುಪಿ, ಮಂಗಳೂರಿನಲ್ಲಿ ಕೆಲಸ ಬೇಕೇ? ಸರ್ಕಾರಿ, ಅರೆಸರ್ಕಾರಿ, ಖಾಸಗಿ ಕಂಪೆನಿಗಳ ಉದ್ಯೋಗಾವಕಾಶಗಳ ಕುರಿತ ಸಂಪೂರ್ಣ ವಿವರಗಳಿಗೆ ಈ  ಲಿಂಕ್ ಕ್ಲಿಕ್ ಮಾಡಿ

ನೀವು ಈಗಾಗಲೇ ಶಿಕ್ಷಣ ಮುಗಿಸಿ ಉದ್ಯೋಗದ ಹುಡುಕಾಟದಲ್ಲಿ ಇದ್ದೀರಾ? ಉಡುಪಿ, ಮಂಗಳೂರಿನಲ್ಲಿ ಕೆಲಸ ಬೇಕೇ? ಸರ್ಕಾರಿ, ಅರೆಸರ್ಕಾರಿ, ಖಾಸಗಿ ಕಂಪೆನಿಗಳ ಉದ್ಯೋಗಾವಕಾಶಗಳ ಕುರಿತ ಸಂಪೂರ್ಣ ವಿವರಗಳಿಗೆ ಈ  ಲಿಂಕ್ ಕ್ಲಿಕ್ ಮಾಡಿ

Leave a Reply

Your email address will not be published. Required fields are marked *